ಸೆ.24: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಾಗೃತಿ ಅಭಿಯಾನ ಉದ್ಘಾಟನೆ

Update: 2019-09-22 12:39 GMT

ಮಂಗಳೂರು,ಸೆ.22:ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಪತ್ರಕರ್ತರ ಸಂಘದ ಬ್ರ್ಯಾಂಡ್ ಮಂಗಳೂರು ಕಾರ್ಯಕ್ರಮದ ಅಂಗವಾಗಿ ಶಾಲಾ-ಕಾಲೇಜುಗಳಲ್ಲಿ ಕೋಮು ಸೌಹಾರ್ದತೆ ಜಾಗೃತಿ, ಮಾದಕ ದ್ರವ್ಯ ಹಾಗೂ ಸೈಬರ್ ಕ್ರೈಂ ವಿರುದ್ಧ ಅಭಿಯಾನ ನಡೆಯಲಿದೆ. ಇದರ ಉದ್ಘಾಟನಾ ಕಾರ್ಯಕ್ರಮ ಸೆ. 24ರಂದು ಬೆಳಗ್ಗೆ 9.30ಕ್ಕೆ ನಗರದ ಕೆನರಾ ಕಾಲೇಜಿನಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಕಡ್ಲೂರ್ ಸತ್ಯನಾರಾಯಣಾಚಾರ್ಯ ಮಾಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ .ಪಿಎಸ್. ಹರ್ಷ ಜಾಗೃತಿ ಪೋಸ್ಟರ್ ಬಿಡುಗಡೆ ಮಾಡಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಗೌರವ ಕಾರ್ಯದರ್ಶಿ ಎಂ. ರಂಗನಾಥ್ ಭಟ್ ಹಾಗೂ ಕಾಲೇಜು ಪ್ರಿನ್ಸಿಪಾಲ್‌ರಾದ ಡಾ.ಕೆ ವಿ. ಮಾಲಿನಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News