ಆಳ್ವಾಸ್‍ಗೆ ಪುರುಷರ ಯೋಗದಲ್ಲಿ ಸಮಗ್ರ ಪ್ರಶಸ್ತಿ

Update: 2019-09-22 14:48 GMT

ಮೂಡಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಲೇಜು, ಹಿರಿಯಡ್ಕದ ಜಂಟಿ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಮಹಿಳಾ ಹಾಗೂ ಪುರುಷರ ಯೋಗಾಸನ ಸ್ಪರ್ಧೆಯನ್ನು ಆಯೋಜಿಸಿತ್ತು. ಆಳ್ವಾಸ್ ಪದವಿ ಕಾಲೇಜಿನ ಪುರುಷರ ತಂಡ ಸಮಗ್ರ ಪ್ರಶಸ್ತಿಗೆ ಭಾಜನರಾದರೆ, ಮಹಿಳಾ ತಂಡಕ್ಕೆ ದ್ವಿತೀಯ ಸ್ಥಾನ ಲಭಿಸಿದೆ. 

ಮಂಗಳೂರು ವಿಶ್ವವಿದ್ಯಾನಿಲಯದ 20 ಕಾಲೇಜುಗಳಿಂದ 250 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದು, ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು 'ಯೋಗಕುಮಾರ' ಹಾಗೂ 'ಯೋಗಕುಮಾರಿ' ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ.

ಪುರುಷರ ವಿಭಾಗದಲ್ಲಿ ವೀರಭದ್ರ ಪ್ರಥಮ, ಪ್ರಶಾಂತ ದ್ವಿತೀಯ, ಸುದರ್ಶನ್ ತೃತೀಯ, ತರುಣ್ ಚತುರ್ಥ, ರಾಘವೇಂದ್ರ ಐದನೇ ಸ್ಥಾನ ಹಾಗೂ ಮಹಿಳೆಯರ ವಿಭಾಗದಲ್ಲಿ  ತೇಜಸ್ವಿನಿ ಪ್ರಥಮ ಸ್ಥಾನ ಗಳಿಸಿದ್ದಾರೆ. 

ವಿದ್ಯಾರ್ಥಿಗಳ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ, ಮ್ಯಾನೇಜ್ಮೇಂಟ್ ಟ್ರಸ್ಟಿ ವಿವೇಕ್ ಆಳ್ವ ಶ್ಲಾಘಿಸಿದ್ದಾರೆ. 
                                                                                                                          

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News