ಬಿಬಿಎಂಪಿ ವ್ಯಾಪ್ತಿಯಲ್ಲಿ 15 ಸಾವಿರ ಅಕ್ರಮ ಕಟ್ಟಡಗಳಿವೆ: ಹೈಕೋರ್ಟ್‌ಗೆ ಮಾಹಿತಿ

Update: 2019-09-22 17:34 GMT

ಬೆಂಗಳೂರು, ಸೆ. 22: ಬೆಂಗಳೂರಿನಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ರಮ ಕಟ್ಟಡಗಳ ತೆರವಿಗೆ ಇರುವ ವ್ಯವಸ್ಥೆ, ದೂರುಗಳ ಮೇಲೆ ಕೈಗೊಂಡಿರುವ ಕ್ರಮಗಳ ಕುರಿತು ವರದಿ ನೀಡಲು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಅಕ್ರಮ ಕಟ್ಟಡ ತೆರವಿಗೆ ಬಿಬಿಎಂಪಿಗೆ ನಿರ್ದೇಶನ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಮುಹಮ್ಮದ್ ನವಾಝ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಸರಕಾರದ ಪರ ವಾದಿಸಿದ ವಕೀಲರು, ಬಿಬಿಎಂಪಿ ವ್ಯಾಪ್ತಿಯಲ್ಲಿ 10 ರಿಂದ 15 ಸಾವಿರ ಅಕ್ರಮ ಕಟ್ಟಡಗಳಿದ್ದು, ಅರ್ಜಿದಾರ ನೀಡಿರುವ ಅಕ್ರಮ ಕಟ್ಟಡಗಳ ಮಾಲಕರಿಗೆ ನೋಟಿಸ್ ನೀಡಿದ್ದೇವೆ ಎಂದು ಪೀಠಕ್ಕೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು ಪ್ರತಿ ವಾರ್ಡ್‌ಗಳ ಅಕ್ರಮ ಕಟ್ಟಡ ನಿರ್ಮಾಣದ ಮೇಲೆ ನಿಗಾ ಇಡಲು ವಿಚಕ್ಷಣ ಅಧಿಕಾರಿ ನೇಮಕ ಮಾಡಿ, ತಪ್ಪಿತಸ್ಥರ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಂಡಿರುವ ಕುರಿತು ವರದಿ ನೀಡಿ, ಹಾಗೂ ಬಿಬಿಎಂಪಿ ಆಯುಕ್ತರಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News