​ಬಿಬಿಎಂಪಿ ಮೇಯರ್ ಚುನಾವಣೆ ಮುಂದೂಡಿಕೆ

Update: 2019-09-23 15:14 GMT

ಬೆಂಗಳೂರು, ಸೆ.23: ಬಿಬಿಎಂಪಿಯ ಮೇಯರ್, ಉಪ ಮೇಯರ್ ಹಾಗೂ ಸ್ಥಾಯಿ ಸಮಿತಿ ಚುನಾವಣೆ ಸೆ.27ರಂದು ನಡೆಯಬೇಕಿತ್ತು. ಆದರೆ, ಚುನಾವಣೆಯನ್ನು ಅಕ್ಟೋಬರ್ 1ಕ್ಕೆ ಮುಂದೂಡಿರುವುದಾಗಿ ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ ತಿಳಿಸಿದ್ದಾರೆ.

ಇನ್ನು, 15 ಕ್ಷೇತ್ರಗಳಿಗೆ ಉಪ ಚುನಾವಣೆಗೆ ದಿನಾಂಕಗಳು ಘೋಷಣೆಯಾಗಿವೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಚುನಾವಣೆಯನ್ನು ನಡೆಸಬೇಕೆ ಎಂಬ ಬಗ್ಗೆ ಪ್ರಾದೇಶಿಕ ಆಯುಕ್ತರು ಕಾನೂನು ಇಲಾಖೆ ಮತ್ತು ಚುನಾವಣಾ ಆಯೋಗದ ಸಲಹೆಯನ್ನು ಪಡೆದುಕೊಂಡು ಸ್ಪಷ್ಟಪಡಿಸಿದ್ದಾರೆ.

ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ಜೊತೆಗೆ 12 ಸ್ಥಾಯಿ ಸಮಿತಿಗಳ ಚುನಾವಣೆಯನ್ನು ನಡೆಸುವುದು ಹಿಂದಿನಿಂದಲೂ ಬಂದ ವಾಡಿಕೆ. ಆದರೆ ಕಳೆದ ನಾಲ್ಕು ವರ್ಷಗಳಲ್ಲಿ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ಮಾತ್ರವೇ ನಡೆಸಿ ಸ್ಥಾಯಿ ಸಮಿತಿ ಚುನಾವಣೆಯನ್ನು ಒಂದೆರಡು ತಿಂಗಳುಗಳ ಕಾಲ ಬಿಟ್ಟು ನಡೆಸಲಾಗುತ್ತಿತ್ತು.

ಸ್ಥಾಯಿ ಸಮಿತಿ ಚುನಾವಣೆಗಳನ್ನು ಮೇಯರ್ ಮತ್ತು ಉಪ ಮೇಯರ್ ಚುನಾವಣೆ ಜೊತೆಗೆ ನಡೆಸಬೇಕಾಗಿರುವುದರಿಂದ ಕೆಲ ಕಾನೂನು ತೊಡಕುಗಳು ಎದುರಾಗಿತ್ತು. ಹಾಗಾಗಿ ಈ ಬಗ್ಗೆಯೂ ಪ್ರಾದೇಶಿಕ ಆಯುಕ್ತರು ಕಾನೂನು ಇಲಾಖೆ ಮತ್ತು ಚುನಾವಣಾ ಆಯೋಗದ ಅಭಿಪ್ರಾಯವನ್ನು ಪಡೆದುಕೊಂಡು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News