ಅನರ್ಹ ಶಾಸಕರ ಅರ್ಜಿಯ ವಿಚಾರಣೆ 1 ಗಂಟೆ ಮುಂದೂಡಿಕೆ

Update: 2019-09-23 06:41 GMT

ಹೊಸದಿಲ್ಲಿ, ಸೆ.23: ಸುಪ್ರೀಂ ಕೋರ್ಟ್ ನಲ್ಲಿ ಅನರ್ಹ ಶಾಸಕರ ಅರ್ಜಿಯ ವಿಚಾರಣೆಯನ್ನು  ಇಂದು ಬೆಳಗ್ಗೆ ಸ್ವಲ್ಪ ಹೊತ್ತು ಮುಂದೂಡಲಾಯಿತು.

ಬೇರೆ ಪ್ರಕರಣಗಳ ವಿಚಾರಣೆಯ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಎನ್ ವಿ ರಮಣ, ನ್ಯಾ. ಕೃಷ್ಣ ಮುರಾರಿ ಮತ್ತು ನ್ಯಾ. ಸಂಜಯ್ ಖನ್ನಾ ನೇತೃತ್ವದ ತ್ರಿ ಸದಸ್ಯ ಪೀಠ ಮುಂದೂಡಿದೆ. ಮಧ್ಯಾಹ್ನ 1 ಗಂಟೆಯ ಬಳಿಕ ವಿಚಾರಣೆ ನಡೆಯಲಿದೆ.

  ಅನರ್ಹ ಶಾಸಕರ ಪರ  ಹಿರಿಯ ವಕೀಲರಾದ ಮುಕುಲ್ ರೋಹ್ಟಗಿ ವಾದ ಮಂಡಿಸಿ   ಚುನಾವಣೆ ದಿನಾಂಕ ಘೋಷಣೆಯಾಗಿರುವುದರಿಂದ ಅರ್ಜಿಯ ತುರ್ತು ವಿಚಾರಣೆ ನಡೆಸಿ ಆದೇಶ ನೀಡಬೇಕು ಅಥವಾ ಉಪ ಚುನಾವಣೆಗೆ ತಡೆಯಾಜ್ಞೆ ನೀಡಬೇಕು. ಸುಪ್ರೀಂ ಕೋರ್ಟ್ ನ ತೀರ್ಪಿನಂತೆ   ಶಾಸಕರ ರಾಜೀನಾಮೆ ಅಂಗೀಕಾರವಾಗಿಲ್ಲ. ಸ್ಪೀಕರ್ ತೀರ್ಪು ಪ್ರಶ್ನಿಸಿ ಶಾಸಕರು ಅರ್ಜಿ ಸಲ್ಲಿಸಿ 8 ವಾರಗಳು ಸಂದಿದೆ. ಈ ಕಾರಣದಿಂದಾಗಿ ಅರ್ಜಿಯ ತುರ್ತು ವಿಚಾರಣೆ ನಡೆಸಿ   ನ್ಯಾಯಾಲಯ ತೀರ್ಪು ನೀಡಬೇಕು ಎಂದರು. 

 ಕಾಂಗ್ರೆಸ್ ಪರ ವಕೀಲರು ವಿಚಾರಣೆ ವೇಳೆ  ಹಾಜರಾಗಲಿಲ್ಲ. ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಒಂದು ಗಂಟೆ ಮುಂದೂಡಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News