ಅನರ್ಹ ಶಾಸಕರು ನಮ್ಮ ಮೇಲೆ ವಿಶ್ವಾಸ ಇಡಬಹುದು: ಡಿಸಿಎಂ ಡಾ.ಅಶ್ವಥ್‌ ನಾರಾಯಣ

Update: 2019-09-23 14:23 GMT

ಬೆಂಗಳೂರು, ಸೆ. 23: ಅನರ್ಹ ಶಾಸಕರು ನಮ್ಮ ಮೇಲೆ ವಿಶ್ವಾಸ ಇರಿಸಬಹುದು. ಸುಪ್ರೀಂ ಕೋರ್ಟ್ ತೀರ್ಪು ಬಂದ ಬಳಿಕ ಯಾವ ವ್ಯಕ್ತಿಗೆ ಎಲ್ಲೆಲ್ಲಿ ಅವಕಾಶ ಕಲ್ಪಿಸಬೇಕೆಂದು ಪಕ್ಷ ತೀರ್ಮಾನಿಸಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರ ಬಗ್ಗೆ ಈಗಲೇ ಏನೂ ಹೇಳಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್ ನಿರ್ಣಯದತ್ತ ಎಲ್ಲರು ದೃಷ್ಟಿಯನ್ನಿಟ್ಟಿದ್ದಾರೆ. ಏನೇ ಆದರೂ ಪಕ್ಷ ಉಪ ಚುನಾವಣೆಗೆ ಸನ್ನದ್ಧವಾಗಿದೆ ಎಂದು ಹೇಳಿದರು.

ಈಗಾಗಲೇ ಘೋಷಣೆಯಾಗಿರುವ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿಯೂ ಬಿಜೆಪಿ ಗೆಲುವು ಸಾಧಿಸಲಿದೆ. ಪಕ್ಷದಲ್ಲಿ ಇನ್ನೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಆ ಬಳಿಕ ಈ ಬಗ್ಗೆ ಒಂದು ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಅವರು ಇದೇ ವೇಳೆ ನುಡಿದರು.

ಅನರ್ಹ ಶಾಸಕರ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇದ್ದು, ಅಲ್ಲಿನ ತೀರ್ಮಾನಕ್ಕೂ ಮೊದಲೇ ನಾವು ಏನೂ ಹೇಳಲು ಸಾಧ್ಯವಿಲ್ಲ. ಕೋರ್ಟ್ ನಿರ್ಣಯದ ಮೇಲೆ ಎಲ್ಲವೂ ಆಶ್ರಯಿಸಲಿದೆ ಎಂದು ಅಶ್ವಥ್ ನಾರಾಯಣ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News