ಸಂಸದೀಯ ಕಾರ್ಯದರ್ಶಿಗಳನ್ನು ನೇಮಕ ಮಾಡಲ್ಲ: ಹೈಕೋರ್ಟ್‌ಗೆ ರಾಜ್ಯ ಸರಕಾರ ಹೇಳಿಕೆ

Update: 2019-09-23 16:42 GMT

ಬೆಂಗಳೂರು, ಸೆ.23: ಸಂಸದೀಯ ಕಾರ್ಯದರ್ಶಿಗಳ ಹುದ್ದೆಗೆ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರನ್ನು ನೇಮಕ ಮಾಡುವುದಿಲ್ಲ ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತು ಬೆಂಗಳೂರಿನ ವಿಜಯನಗರದ ಎಂ.ಬಿ.ಆದಿನಾರಾಯಣ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮುರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಮುಹಮ್ಮದ್ ನವಾಝ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಸರಕಾರದ ಪರ ವಕೀಲರು, ಶಾಸಕರು, ವಿಧಾನ ಪರಿಷತ್ ಸದಸ್ಯರನ್ನು ಸಂವಿಧಾನದ ವಿರುದ್ಧವಾಗಿ ಸಂಸದೀಯ ಕಾರ್ಯದರ್ಶಿಗಳ ಹುದ್ದೆಗೆ ನೇಮಕ ಮಾಡುವುದಿಲ್ಲ ಎಂದು ಪೀಠಕ್ಕೆ ತಿಳಿಸಿದರು.

ಸಂಸದೀಯ ಕಾರ್ಯದರ್ಶಿಗಳ ನೇಮಕ ಸಂವಿಧಾನದ ಪರಿಚ್ಛೇದ 164(1-ಎ)ಕ್ಕೆ ವಿರುದ್ಧವಾಗಿದೆ. ಹೀಗಾಗಿ, ಶಾಸಕರು, ಪರಿಷತ್ ಸದಸ್ಯರು, ಇತರರನ್ನು ಸಂಸದೀಯ ಕಾರ್ಯದರ್ಶಿಗಳ ಹುದ್ದೆಯಿಂದ ವಜಾಗೊಳಿಸಲು ಸರಕಾರಕ್ಕೆ ನಿರ್ದೇಶನ ನೀಡಲು ಅರ್ಜಿದಾರರು ಅರ್ಜಿಯಲ್ಲಿ ಮನವಿ ಮಾಡಿದ್ದರು. ಅರ್ಜಿದಾರರ ಪರವಾಗಿ ಜಿ.ಆರ್.ಮೋಹನ್ ಅವರು ವಾದಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News