×
Ad

ಮಾಲಿನ್ಯ ನಿಯಂತ್ರಣ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ: ಹೈಕೋರ್ಟ್

Update: 2019-09-23 22:15 IST

ಬೆಂಗಳೂರು, ಸೆ.23: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹುದ್ದೆಗೆ ಡಾ.ಕೆ.ಸುಧಾಕರ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಹುದ್ದೆಯನ್ನು ಶೀಘ್ರ ಭರ್ತಿ ಮಾಡಬೇಕೆಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶಿಸಿದೆ.

ಡಾ.ಕೆ.ಸುಧಾಕರ್ ಅವರ ನೇಮಕವನ್ನು ಪ್ರಶ್ನಿಸಿ ಆರ್.ಆಂಜನೇಯರೆಡ್ಡಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಮುಹಮ್ಮದ್ ನವಾಝ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ನ್ಯಾಯಪೀಠವು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರನ್ನಾಗಿ ಸಂಬಂಧಪಟ್ಟ ಕ್ಷೇತ್ರದ ತಜ್ಞರನ್ನು ನೇಮಕ ಮಾಡಬೇಕು. ನೇಮಕ ವೇಳೆ ಸುಪ್ರೀಂಕೋರ್ಟ್‌ನ ಆದೇಶವನ್ನು ಅನುಸರಿಸಲಿ ಹಾಗೂ ಅಧ್ಯಕ್ಷ ನೇಮಕಾತಿಗೆ ಸಂಬಂಧಿಸಿದಂತೆ ನಿರ್ದಿಷ್ಟ ಮಾರ್ಗಸೂಚಿ ರಚನೆ ಮಾಡಲಿದೆ ಎಂದು ವಿಶ್ವಾಸ ಹಾಗೂ ನಂಬಿಗೆ ಇದೆ ಹೈಕೋಟ್ ತಿಳಿಸಿದೆ.

ಡಾ.ಕೆ.ಸುಧಾಕರ್ ಅವರು ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಪಟ್ಟಂತಹ ವಿಚಾರದಲ್ಲಿ ತಜ್ಞರಲ್ಲ. ಹೀಗಾಗಿ, ಅವರನ್ನು ಈ ಸ್ಥಾನದಿಂದ ವಜಾ ಮಾಡಲು ನಿರ್ದೇಶಿಸಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News