ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ

Update: 2019-09-23 17:56 GMT

ಬೆಂಗಳೂರು, ಸೆ.23: ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿರುವ ಸಿಂಗಾಪುರಂ ರಾಘವಾಚಾರ್ ಕೃಷ್ಣಕುಮಾರ್, ಅಶೋಕ್ ಸುಭಾಷ್ ಚಂದ್ರಕಿಣಗಿ, ಸೂರಜ್ ಗೋವಿಂದರಾಜ್ ಮತ್ತು ಸಚಿನ್ ಶಂಕರ್ ಮಗದಂ ಸೋಮವಾರ ಅಧಿಕಾರ ಸ್ವೀಕರಿಸಿದರು. 

ರಾಜಭವನದಲ್ಲಿ ರಾಜ್ಯಪಾಲ ವಿ.ಆರ್.ವಾಲಾ ಅವರು ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಜರಿದ್ದರು.

ಕರ್ನಾಟಕ ಹೈಕೋರ್ಟ್‌ಗೆ ವಕೀಲರ ವೃಂದದಿಂದ ನಾಲ್ವರನ್ನು ನೂತನ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ನಾಲ್ವರು ನ್ಯಾಯಮೂರ್ತಿಗಳು ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕ ಹೈಕೋರ್ಟ್‌ನಲ್ಲಿ ಹಾಲಿ 31 ನ್ಯಾಯಮೂರ್ತಿಗಳು ಸೇವೆ ಸಲ್ಲಿಸುತ್ತಿದ್ದಾರೆ. ನಾಲ್ವರ ನೇಮಕಾತಿಯಿಂದ ನ್ಯಾಯಮೂರ್ತಿಗಳ ಸಂಖ್ಯೆ 35ಕ್ಕೆ ಏರಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News