ಪ್ರವಾಹ ಸಂತ್ರಸ್ತರಿಗೆ ಸ್ಪಂದಿಸುವಲ್ಲಿ ವಿಫಲ: ಕೇಂದ್ರ, ರಾಜ್ಯ ಸರಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Update: 2019-09-24 10:36 GMT

ಬೆಳಗಾವಿ, ಸೆ.24: ಪ್ರವಾಹ ಸಂತ್ರಸ್ತರ‌ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಮಂಗಳವಾರ ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.

 ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಕಿತ್ತೂರು ರಾಣಿ ಚನ್ನಮ್ಮ ವೃತ್ತದವರೆಗೆ ಮೆರವಣಿಗೆ ನಡೆಸಿ, ಶಕ್ತಿ ಪ್ರದರ್ಶಿಸಿದ ಕಾಂಗ್ರೆಸ್ ಮುಖಂಡರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಶಾಸಕರಾದ ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ್, ಮುಖಂಡರಾದ ಸಿ.ಎಂ.ಇಬ್ರಾಹಿಂ, ಈಶ್ವರ ಖಂಡ್ರೆ, ಎಂ.ಬಿ.ಪಾಟೀಲ, ಉಮಾಶ್ರೀ, ಎಸ್.ಆರ್.ಪಾಟೀಲ, ಡಾ.ಎಚ್.ಸಿ.ಮಹಾದೇವಪ್ಪ, ಎಚ್.ಕೆ.ಪಾಟೀಲ, ಪ್ರಕಾಶ ಹುಕ್ಕೇರಿ ಮತ್ತಿತರರು ಸರ್ಕಾರದ ವಿರುದ್ಧ ಹರಿಹಾಯ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News