×
Ad

ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Update: 2019-09-24 18:17 IST

ಭಟ್ಕಳ, ಸೆ.24: ಇಲ್ಲಿನ ಅಂಜುಮನ್ ಹಾಮಿಯೇ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಪ್ರೌಢಶಾಲೆಗಳ ಇಲಾಖಾ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆಗೈದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸೋಮವಾರ ಅಂಕೋಲಾದಲ್ಲಿ ಜರುಗಿದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಾದ ಫೈಝ್ ಅಹ್ಮದ್ ಮುಹಮ್ಮದ್ ಮಝ್‌ಹರ್ ಪೋಲ್ವಾಟ್ ಜಿಗಿತದಲ್ಲಿ ಪ್ರಥಮ, ಝೀಶಾನ್ ಝಫ್ರುಲ್ಲಾಹ್ ಹ್ಯಾಮರ್ ಎಸೆತದಲ್ಲಿ ಪ್ರಥಮ ಹಾಗೂ ತೌಫೀಖ್ ಅಹ್ಮದ್ ಆರ್.ಕೆ ಹ್ಯಾಮರ್ ಎಸೆತದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ ಎಂದು ಸಂಸ್ಥೆಯ ಮುಖ್ಯ ಶಿಕ್ಷಕ ಶಬ್ಬಿರ್ ಅಹ್ಮದ್ ದಫೇದಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News