ರಾಜ್ಯ ಮಕ್ಕಳ ರಕ್ಷಣಾ ಆಯೋಗಕ್ಕೆ ಚೇಂಜ್ ಮೇಕರ್ ಪ್ರಶಸ್ತಿ

Update: 2019-09-24 15:01 GMT

ಬೆಂಗಳೂರು, ಸೆ.24: ರಾಜ್ಯದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪೋಷಣೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ದಿ ಚೇಂಜ್ ಮೇಕರ್-2019 ಪ್ರಶಸ್ತಿಗೆ ಭಾಜನವಾಗಿದೆ.

ರಾಜ್ಯದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪೋಷಣೆಗೆ ಸಂಬಂಧಿಸಿದಂತೆ ಆಯೋಗವು ಕೈಗೊಂಡ ಐತಿಹಾಸಿಕ ಹೆಜ್ಜೆ ಮತ್ತು ಇವುಗಳಿಗೆ ಸಂಬಂಧಿಸಿದಂತೆ ಕಾನೂನುಗಳ ಪರಿಣಾಮಕಾರಿ ಅನುಷ್ಠಾನದ ಹಿನ್ನೆಲೆಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಸೆ.27 ರಂದು ವಿಜಯವಾಡದಲ್ಲಿ ನಡೆಯಲಿರುವ ದಿ ರೈಟ್ ಸ್ಟಾರ್ಟ್ ಸಮಿಟ್ -2019 ಸಮಾರಂಭದಲ್ಲಿ ಆಂಧ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಅಲ್ಲ ಕಲಿ ಕೃಷ್ಣ ಶ್ರೀನಿವಾಸ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ.ಅಂತೋಣಿ ಸೆಬಾಸ್ಟಿಯನ್‌ರಿಗೆ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

ಸೇವ್ ದಿ ಚಿಲ್ಟ್ರನ್‌ನ 100 ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ, ಮಕ್ಕಳ ಹಕ್ಕುಗಳು ಮತ್ತು ಅವುಗಳ ರಕ್ಷಣೆಯ ಕ್ಷೇತ್ರದಲ್ಲಿ ನಿರಂತರವಾಗಿ ಗಣನೀಯ ಸಾಧನೆ ಮಾಡಿರುವ ಸರಕಾರೇತರ ಸಂಸ್ಥೆಗಳು, ವ್ಯಕ್ತಿಗಳು ಮತ್ತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಗಳನ್ನು ಗುರುತಿಸಿ ಅವರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News