ಮಂಗಳೂರು: ಕಾನೂನು ಸುವ್ಯವಸ್ಥೆ ಬಗ್ಗೆ ಡಿಜಿ-ಐಜಿಪಿ ಚರ್ಚೆ

Update: 2019-09-24 15:10 GMT

ಮಂಗಳೂರು, ಸೆ.24:ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕ (ಡಿಜಿ-ಐಜಿಪಿ) ನೀಲಮಣಿ ಎನ್. ರಾಜು ಕುಟುಂಬ ಸಮೇತ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದ ಬಳಿಕ ಮಂಗಳೂರಿಗೆ ಆಗಮಿಸಿ ಕರಾವಳಿ ಜಿಲ್ಲೆಗಳ ಕಾನೂನು ಸುವ್ಯವಸ್ಥೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಮಾಹಿತಿ ಪಡೆದುಕೊಂಡರು.

ಅಪರಾಹ್ನ 2:30ಕ್ಕೆ ಮಂಗಳೂರಿಗೆ ಆಗಮಿಸಿದ ಡಿಜಿಪಿ ನೀಲಮಣಿ ನಗರದ ಮೇರಿಹಿಲ್‌ನಲ್ಲಿರುವ ಪಶ್ಚಿಮ ವಲಯದ ಐಜಿಪಿ ಅರುಣ್ ಚಕ್ರವರ್ತಿ ಅವರ ಕ್ಯಾಂಪ್ ಆಫೀಸಿನಲ್ಲಿ ಅನೌಪಚಾರಿಕವಾಗಿ ಸಭೆ ನಡೆಸಿದರು.

 ಸಭೆಯಲ್ಲಿ ಪಶ್ಚಿಮ ವಲಯ ಐಜಿಪಿ ಹಾಗೂ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿ ಮಾಹಿತಿ ಪಡೆದುಕೊಂಡರು. ಅಲ್ಲದೆ ಇಲಾಖೆಯ ಕಾರ್ಯಚಟುವಟಿಕೆಗಳು, ಸೌಲಭ್ಯಗಳು, ಸಿಬ್ಬಂದಿ ನೇಮಕಾತಿ ಮತ್ತಿತರ ವಿವರಗಳನ್ನು ಪಡೆದುಕೊಂಡರು. ಸಂಜೆ 5:45ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ಬೆಂಗಳೂರಿಗೆ ತೆರಳಿದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಭೆಯಲ್ಲಿ ಪಶ್ಚಿಮ ವಲಯದ ಐಜಿಪಿ ಅರುಣ್ ಚಕ್ರವರ್ತಿ, ಮಂಗಳೂರು ಕಮಿಷನರ್ ಡಾ. ಪಿ.ಎಸ್. ಹರ್ಷ, ಜಿಲ್ಲಾ ಎಸ್ಪಿ ಲಕ್ಷ್ಮೀಪ್ರಸಾದ್, ಮಂಗಳೂರು ನಗರ ಕಾನೂನು ಸುವ್ಯವಸ್ಥಾ ವಿಭಾಗದ ಉಪ ಪೊಲೀಸ್ ಆಯುಕ್ತ ಅರುಣಾಂಶುಗಿರಿ, ಸಂಚಾರ ಮತ್ತು ಅಪರಾಧ ವಿಭಾಗದ ಉಪ ಪೊಲೀಸ್ ಆಯುಕ್ತ ಲಕ್ಷ್ಮೀಗಣೇಶ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News