ಶಬರಿಮಲೆ; ಸುಪ್ರೀಂ ಕೋರ್ಟ್‌ನಲ್ಲಿ ಸಾಸ್ ಪರ ತೀರ್ಪು: ಟಿ.ಬಿ.ಶೇಖರ್ ವಿಶ್ವಾಸ

Update: 2019-09-24 16:04 GMT

 ಉಡುಪಿ, ಸೆ.24: ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರದ ಕುರಿತು ಸುಪ್ರೀಂ ಕೋರ್ಟಿಗೆ ರಿಟ್ ಪಿಟಿಶನ್ ಹಾಕಲಾಗಿದ್ದು, ಇದರ ವಿಚಾರಣೆ ಪೂರ್ಣಗೊಂಡಿದೆ. ಇನ್ನು ಅಂತಿಮ ತೀರ್ಪು ಹೊರಬರಲು ಬಾಕಿ ಇದೆ. ಈ ತೀರ್ಪು ನಮ್ಮ ಪರವಾಗಿ ಬರುತ್ತದೆ ಎಂಬ ವಿಶ್ವಾಸ ನಮಗೆ ಇದೆ ಎಂದು ಶಬರಿ ಮಲೆ ಅಯ್ಯಪ್ಪ ಸೇವಾ ಸಮಾಜಂ(ಸಾಸ್) ರಾಷ್ಟ್ರೀಯ ಅಧ್ಯಕ್ಷ ಟಿ.ಬಿ.ಶೇಖರ್ ತಿಳಿಸಿದ್ದಾರೆ.

  ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಚಾರದಲ್ಲಿ ಈಗಾಗಲೇ ಕೇರಳ ಸರಕಾರ ಮನವೊಲಿಸುವ ಕೆಲಸ ಮಾಡಿದ್ದೇವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಇದರ ಬಿಸಿ ಸರಕಾರಕ್ಕೆ ಮುಟ್ಟಿದೆ. ಈ ಬಗ್ಗೆ ಕೇರಳ ಸರಕಾರ ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟಿಗೆಸಲ್ಲಿಸುವ ಸಾಧ್ಯತೆ ಇದೆ ಎಂದರು.

ಶಬರಿಮಲೆ ಮಹಿಳೆಯರ ಪ್ರವೇಶ ವಿಚಾರದಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿ ಸುಮಾರು 3200 ಮಂದಿಯ ವಿರುದ್ಧ ಪ್ರಕರಣಗಳನ್ನು ದಾಖ ಲಿಸಿಕೊಳ್ಳಲಾಗಿದೆ. ನಾವು ಶಬರಿಮಲೆ ಆ್ಯಕ್ಷನ್ ಕೌನ್ಸಿಲ್ ಜೊತೆ ಸೇರಿ ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.

ಅಯ್ಯಪ್ಪ ಕುರಿತು ಪ್ರಚಾರ ನಡೆಸುವ ಉದ್ದೇಶದಿಂದ ತಮಿಳುನಾಡು ರಾಜ್ಯದಲ್ಲಿ ಏಳು ಕಡೆಯಿಂದ ಹಾಗೂ ಕೇರಳ ರಾಜ್ಯದ ನಾಲ್ಕು ಕಡೆಯಿಂದ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಈ ರಥ 60 ದಿನಗಳ ಕಾಲ ಹಳ್ಳಿಹಳ್ಳಿ ಗಳಲ್ಲಿ ಸಂಚರಿಸಿ ಪ್ರಚಾರ ಕಾರ್ಯ ನಡೆಸಲಿದೆ. ಮುಂದಿನ ವರ್ಷ ಫೆಬ್ರವರಿ ತಿಂಗಳಲ್ಲಿ ಕರ್ನಾಟಕ ರಾಜ್ಯದ ಗುರುಸ್ವಾಮಿಗಳ ಸಮ್ಮೇಳನವನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಈರೋಡ್ ರಾಜನ್, ಕರ್ನಾಟಕ ರಾಜ್ಯಾಧ್ಯಕ್ಷ ಎಂ.ರೋಜಾಷಣ್ಮುಗಂ, ಪ್ರಧಾನ ಕಾರ್ಯದರ್ಶಿ ಎಸ್.ಎನ್.ಕೃಷ್ಣಯ್ಯ, ಉಡುಪಿ ಜಿಲ್ಲಾಧ್ಯಕ್ಷ ರಾಧಾ ಕೃಷ್ಣ ಮೆಂಡನ್, ಗೌರವಾಧ್ಯಕ್ಷ ಹರಿಯಪ್ಪ ಕೋಟ್ಯಾನ್ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News