×
Ad

ಭಟ್ಕಳ: ಆರ್.ಎನ್.ಎಸ್ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Update: 2019-09-24 23:10 IST

ಭಟ್ಕಳ: ಕಾರವಾರ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾ ಕೂಟದಲ್ಲಿ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಮುರ್ಡೇಶ್ವರ ಆರ್.ಎನ್.ಎಸ್ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳಾದ ಸಂಜನಾ ಮಾದೇವ ನಾಯ್ಕ,  ಅಮೋಘ ಜೆ. ಎಮ್, ಗಗನ್ ಎಮ್. ನಾಯ್ಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಯೋಗಾಸನದಲ್ಲಿ ವರಮಹಾಲಕ್ಷ್ಮೀ ಆರ್. ಕಾಮತ್ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿಜೇತ ವಿದ್ಯಾರ್ಥಿಯನ್ನು ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಡಾ. ಆರ್.ಎನ್. ಶೆಟ್ಟಿ, ಪ್ರಾಂಶುಪಾಲ ಡಾ. ಸುರೇಶ್ ಶೆಟ್ಟಿ ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News