ಉಪ ಚುನಾವಣೆ: ರಾಜಧಾನಿಯ 3 ಕ್ಷೇತ್ರಗಳಲ್ಲಿ ಇನ್ನೂ ಸಲ್ಲಿಕೆಯಾಗದ ನಾಮಪತ್ರ

Update: 2019-09-25 15:13 GMT

ಬೆಂಗಳೂರು, ಸೆ. 25: ರಾಜಧಾನಿ ಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಚುರುಕುಗೊಂಡಿದೆ. ಆದರೆ, ಮೂರು ಕ್ಷೇತ್ರಗಳಲ್ಲಿ ಮಾತ್ರ ಇದುವರೆಗೂ ಯಾವಬ್ಬರೂ ನಾಮಪತ್ರ ಸಲ್ಲಿಕೆ ಮಾಡಿಲ್ಲ.

ಬುಧವಾರ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಇಬ್ಬರು ಮಹಿಳೆಯರು ಸೇರಿ ಒಟ್ಟು ಹತ್ತು ಮಂದಿ ಈಗಾಗಲೇ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಆದರೆ, ಕೆ.ಆರ್.ಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ ಕ್ಷೇತ್ರಗಳಲ್ಲಿ ಯಾರು ಸಹ ನಾಮಪತ್ರ ಸಲ್ಲಿಕೆ ಮಾಡಿಲ್ಲ ಎಂದು ಮೂಲಗಳು ತಿಳಿಸಿವೆ.

ಚುನಾವಣಾ ವೇಳಾ ಪಟ್ಟಿಯಂತೆ ಸೆ.23ರಂದು ಚುನಾವಣಾ ಅಧಿಸೂಚನೆ ಹೊರಡಿಸಿದ್ದು, ನಾಮಪತ್ರ ಸ್ವೀಕಾರ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಸೆ.30 ಕೊನೆಯ ದಿನವಾಗಿದ್ದು, ಅ.1 ರಂದು ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದ್ದು, ನಾಮಪತ್ರಗಳನ್ನು ಹಿಂಪಡೆಯಲು ಅ.3 ರಂದು ಕೊನೆಯ ದಿನವಾಗಿರುತ್ತದೆ. ಅ.21 ಮತದಾನ ನಡೆಯಲಿದ್ದು, ಅ.24ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಅ.27 ರಂದು ಚುನಾವಣಾ ನೀತಿ ಸಂಹಿತೆ ಕೊನೆಗೊಳ್ಳಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News