ಬಂಟ್ವಾಳ: ವಿವಾಹಿತೆ ಮಹಿಳೆ ಆತ್ಮಹತ್ಯೆ
Update: 2019-09-25 22:35 IST
ಬಂಟ್ವಾಳ, ಸೆ. 25: ವಿವಾಹಿತೆ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಪಾಣೆಮಂಗಳೂರು ಎಂಬಲ್ಲಿ ಬುಧವಾರ ನಡೆದಿದೆ.
ಪಾಣೆಮಂಗಳೂರು ಗ್ರಾಮದ ರಂಗೇಲು ನಿವಾಸಿ ಜಮೀಲಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಇಂದು ಬೆಳಿಗ್ಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.