ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ ಜಾಥ

Update: 2019-09-25 17:31 GMT

ಉಡುಪಿ, ಸೆ.25:ಜಿಪಂ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಕಾರ್ಕಳ, ಕಾರ್ಕಳ ಸರಕಾರಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ಕುರಿತು ಸಾರ್ವಜನಿಕರಿಗೆ ಪ್ರಚುರಪಡಿಸುವ ಸಲುವಾಗಿ ಮಂಗಳವಾರ ಕಾರ್ಕಳ ಪೇಟೆಯಲ್ಲಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.

ಜಿಪಂ ಸದಸ್ಯೆ ದಿವ್ಯಶ್ರೀ ಅಮೀನ್, ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ಫಲ ಸಮರ್ಪಕವಾಗಿ ಬಡಜನರಿಗೆ ದೊರಕಲಿ ಎಂದು ಶುಭ ಹಾರೈಸಿ ಹಸಿರು ನಿಶಾನೆ ತೋರಿ ಜಾಥಾಕ್ಕೆ ಚಾಲನೆ ನೀಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಕೃಷ್ಣಾನಂದ ಶೆಟ್ಟಿ ಪ್ರಾಸ್ತಾವಿಕ ಮಾತುಗಳ ನ್ನಾಡಿದರು. ತಹಶೀಲ್ದಾರ ಪುರಂದರ ಹೆಗ್ಡೆ, ಕಾರ್ಕಳ ಸಾರ್ವಜನಿಕ ಆಸ್ಪತೆಯ ಆಡಳಿತ ವೈದ್ಯಾಧಿಕಾರಿ ಡಾ.ಪಿ.ಕೆ ಮಲ್ಯ, ಡಾ.ಉದಯಕುಮಾರ್, ಪುರಸಭಾ ಸದಸ್ಯೆ ಸುಮಕೇಶವ, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಮಾಧವ ಭಟ್, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟನ್ ಜಿಲ್ಲಾ ಸಂಯೋಜಕ ಜಗನ್ನಾಥ, ಕೀರ್ತನಾ ಹಾಗೂ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News