ಸುಳ್ವಾಡಿ ವಿಷ ಪ್ರಸಾದ ಪ್ರಕರಣ: ಮೊದಲ ಆರೋಪಿ ಇಮ್ಮಡಿ ಮಹದೇವಸ್ವಾಮಿ ಜಾಮೀನು ಅರ್ಜಿ ವಜಾ
Update: 2019-09-25 23:23 IST
ಬೆಂಗಳೂರು, ಸೆ.25: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಾಲಯದ ವಿಷ ಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಆರೋಪಿ ಇಮ್ಮಡಿ ಮಹದೇವಸ್ವಾಮಿ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಜಾಮೀನು ಕೋರಿ ಇಮ್ಮಡಿ ಮಹದೇವಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರಿದ್ದ ಏಕಸದಸ್ಯ ನ್ಯಾಯಪೀಠ, ಬುಧವಾರ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿತು.