ಅ.2ಕ್ಕೆ ಗಾಂಧಿ ಜಯಂತಿ ಪ್ರಯುಕ್ತ ವಿವಿಧ ಕಾರ್ಯಕ್ರಮ
Update: 2019-09-26 20:38 IST
ಉಡುಪಿ, ಸೆ.26: ಬನ್ನಂಜೆಯಲ್ಲಿರುವ ಜಿಲ್ಲಾ ಬಾಲಭವನದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಅ.2ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲೆಯ 5ರಿಂದ 16 ವರ್ಷದೊಳಗಿನ ಮಕ್ಕಳಿಗೆ ಚಿತ್ರಕಲೆ, ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಚಿತ್ರಕಲೆಯಲ್ಲಿ 5ರಿಂದ 8, 9ರಿಂದ 12 ಹಾಗೂ 13ರಿಂದ 16 ವರ್ಷ ದವರಿಗೆ 3 ಪ್ರತ್ಯೇಕ ಗುಂಪು ಮತ್ತು ಪ್ರಬಂಧ ಸ್ಪರ್ಧೆಯಲ್ಲಿ 10ರಿಂದ 12, 13 ರಿಂದ 16ವರ್ಷದವರೆಗೆ 2 ಗುಂಪುಗಳಾಗಿ ವಿಂಗಡಿಸಲಾಗಿದೆ.
ಸರಕಾರಿ ಶಾಲೆ ಹಾಗೂ ಸೌಲಭ್ಯ ವಂಚಿತ ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ:0820-2574978ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.