×
Ad

ಚಂದ್ರಯಾನ 2 ಲ್ಯಾಂಡರ್‌ನ ಉಂಟಾದ ದೋಷದ ಬಗ್ಗೆ ಸಮಿತಿಯಿಂದ ವಿಶ್ಲೇಷಣೆ: ಇಸ್ರೋ

Update: 2019-09-26 20:38 IST

ಬೆಂಗಳೂರು,ಸೆ.26: ಚಂದ್ರನ ಮೇಲೆ ಇಳಿಯಬೇಕಿದ್ದ ಚಂದ್ರಯಾನ 2ನ ಲ್ಯಾಂಡರ್ ವಿಕ್ರಮ್‌ನಲ್ಲಿ ಅಂತಿಮ ಗಳಿಗೆಯಲ್ಲಿ ಉಂಟಾದ ಸಮಸ್ಯೆಯ ಬಗ್ಗೆ ರಾಷ್ಟ್ರೀಯ ಮಟ್ಟದ ಸಮಿತಿ ವಿಶ್ಲೇಷಣೆ ನಡೆಸಲಿದೆ ಎಂದು ಇಸ್ರೋ ಮುಖ್ಯಸ್ಥ ಕೆ.ಶಿವನ್ ಗುರುವಾರ ತಿಳಿಸಿದ್ದಾರೆ.

ಸದ್ಯ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಲ್ಯಾಂಡರ್ ಜೊತೆ ಸಂಪರ್ಕ ಸಾಧಿಸಲು ವಿಫಲವಾಗಿದ್ದರೂ ಆರ್ಬಿಟರ್ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

“ನಮಗೆ ವಿಕ್ರಮ್ ಜೊತೆ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ. ಲ್ಯಾಂಡರ್‌ನಲ್ಲಿ ಉಂಟಾದ ದೋಷದ ಬಗ್ಗೆ ರಾಷ್ಟ್ರೀಯ ಮಟ್ಟದ ಸಮಿತಿ ವಿಶ್ಲೇಷಣೆ ನಡೆಸುತ್ತಿದೆ. ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದ ನಂತರ ನಾವು ಭವಿಷ್ಯದ ಯೋಜನೆಯಲ್ಲಿ ತೊಡಗಲಿದ್ದೇವೆ. ಅಗತ್ಯ ಅನುಮತಿಗಳು ಮತ್ತು ಇತರ ಪ್ರಕ್ರಿಯೆಗಳು ನಡೆಯಬೇಕಿದೆ. ನಮ್ಮ ಮುಂದಿನ ಆದ್ಯತೆ ಗಗನಯಾನ” ಎಂದು ಇಸ್ರೋ ಮುಖ್ಯಸ್ಥ ತಿಳಿಸಿದ್ದಾರೆ.

ಸೆಪ್ಟೆಂಬರ್ 7ರಂದು ಇಸ್ರೋ ಚಂದ್ರನ ಮೇಲೆ ಸುರಕ್ಷಿತವಾಗಿ ಇಳಿಯುವ ಐತಿಹಾಸಿಕ ಪ್ರಯತ್ನವನ್ನು ಮಾಡಿತ್ತು. ಆದರೆ ಲ್ಯಾಂಡರ್ ವಿಕ್ರಮ್ ಚಂದ್ರನ ಮೇಲೆ ಇಳಿಯುವ ಕೆಲವೇ ನಿಮಿಷಗಳ ಮೊದಲು ಇಸ್ರೋದ ನಿಯಂತ್ರಣ ಕೇಂದ್ರದ ಜೊತೆ ಸಂಪರ್ಕ ಕಳೆದುಕೊಂಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News