×
Ad

ಸೆ.28ರಂದು ಕರಾವಳಿ ಸಿರಿ ಪ್ರಶಸ್ತಿ ಪ್ರದಾನ

Update: 2019-09-26 20:42 IST

ಬೆಂಗಳೂರು, ಸೆ. 26: ಕರಾವಳಿ ಭಾಗದ ಸಾಧಕರನ್ನು ಗುರುತಿಸಿ ಗೌರವಿಸುವ ನಿಟ್ಟಿನಲ್ಲಿ ಕರಾವಳಿ ಸಿರಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆ.28ರಂದು ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಕನ್ನಡ ಕರಾವಳಿ ವೇದಿಕೆ ಆಯೋಜಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಎಸ್.ರವಿರಾಜ್ ಶೆಟ್ಟಿ, ಕನ್ನಡ ಕರಾವಳಿ ವೇದಿಕೆ 22 ವರ್ಷಗಳಿಂದ ಅನೇಕ ಸೇವಾ ಕಾರ್ಯಕ್ರಮಗಳು ಮಾಡುವ ಮೂಲಕ ಜನರ ಪ್ರಶಂಸೆಗೆ ಪಾತ್ರವಾಗಿದೆ. ಬೆಂಗಳೂರಿನಲ್ಲಿ ರಾಣಿ ಅಬ್ಬಕ್ಕ ಪ್ರತಿಮೆ ಸ್ಥಾಪನೆ, ಎಂಡೋ ಸಲ್ಫಾನ್ ಪೀಡಿತರಿಗೆ ನೆರವು, ತುಳು ಭಾಷೆ 8ನೇ ಶೆಡ್ಯೂಲ್‌ಗೆ ಸೇರ್ಪಡೆ, ಪಾರಂಪರಿಕ ಕಲೆ, ಕಂಬಳ ನಿಷೇಧ ತೆರವುಗೊಳಿಸುವುದು ಸೇರಿದಂತೆ ಅನೇಕ ಸಮಸ್ಯೆಗಳ ಬಗ್ಗೆ ಹೋರಾಟ ಮಾಡಲಾಗಿದೆ ಎಂದು ತಿಳಿಸಿದರು.

ಇನ್ನು, ಸೆ.28ರಂದು ಸಂಜೆ ಕೇಂದ್ರ ಸಚಿವ ಡಿ.ಸದಾನಂದಗೌಡ ಕರಾವಳಿ ಸಿರಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಲಿದ್ದು, ನ್ಯಾಯಮೂರ್ತಿ ಟಿ.ವಿಶ್ವನಾಥ್ ಶೆಟ್ಟಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಸಚಿವ ಕೋಟಾ ಶ್ರೀನಿವಾಸ್, ಮಾಜಿ ಸಚಿವ ಎಂ.ಕೃಷ್ಣಪ್ಪ, ಶಾಸಕ ಜಿ.ಎಂ.ಶಿವಕುಮಾರ್ ಶೆಟ್ಟಿ ಆಗಮಿಸಲಿದ್ದಾರೆ ಎಂದರು.

ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ, ಆಳ್ವಾಸ್ ಎಜುಕೇಷನ್ ಫೌಂಡೇ ಷನ್ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವಾ ಕರಾವಳಿ ಸಿರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News