ದೀಕ್ಷಾ ಭೂಮಿ ಯಾತ್ರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಉಡುಪಿ, ಸೆ.26: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಡಾ.ಬಿ.ಆರ್. ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ನಿಯೋಜಿಸಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಇಲಾಖಾ ವೆಬ್‌ಸೈಟ್ www.sw.kar.nic.in ನಲ್ಲಿ ದೀಕ್ಷಾ ಭೂಮಿ ಯಾತ್ರೆ ಎಂಬ ಹೆಸರಿನಲ್ಲಿ ಲಭ್ಯವಿದೆ.
ನಿಬಂಧನೆಗಳು: ಯಾತ್ರಾರ್ಥಿಗಳು ಪ.ಜಾತಿ/ ಪ.ಪಂಗಡಕ್ಕೆ ಸೇರಿದವ ರಾಗಿದ್ದು, ಬಿಪಿಎಲ್ ಕಾರ್ಡ್ ಹೊಂದಿರಬೇಕು. ಯಾತ್ರಾರ್ಥಿಯ ವಯಸ್ಸು ಕನಿಷ್ಟ 18 ವರ್ಷ ಮೇಲ್ಪಟ್ಟಿರಬೇಕು. ಡಾ.ಬಿ.ಆರ್.ಅಂಬೇಡ್ಕರ್ ಚಿಂತನೆಗಳ ಬಗ್ಗೆ ಅರಿವು ಹೊಂದಿದ್ದು, ಸಮಾಜ ಸೇವೆ ಮಾಡಿದ ಅನುಭವ ಹೊಂದಿರಬೇಕು. ಈಗಾಗಲೇ ಸರಕಾರದ ವೆಚ್ಚದಲ್ಲಿ ಒಮ್ಮೆ ನಾಗಪುರದ ದೀಕ್ಷಾ ಭೂಮಿ ಪ್ರವಾಸ ಮಾಡಿದವರಿಗೆ ಮತ್ತೆ ಅವಕಾಶವಿಲ್ಲ. ರಾಜ್ಯದಲ್ಲಿ ಆಯಾ ಜಿಲ್ಲೆಗಳಿಂದಲೇ ನಾಗಾಪುರಕ್ಕೆ ಹೋಗಿ ಬರಲು ತಗಲುವ ಪ್ರಯಾಣದ ವೆಚ್ಚವನ್ನು ಮಾತ್ರ ಸರಕಾರದಿಂದ ಭರಿಸಲಾಗುವುದು.
ಅರ್ಹ ಆಸಕ್ತ ಅಭ್ಯರ್ಥಿಗಳು ಅ.10ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಹೆಚ್ಚುವರಿಯಾಗಿ 15 ದಿನಗಳ ಕಾಲಾವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಿದ ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಯೊಂದಿಗೆ ಒಂದು ವಾರದೊಳಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ (ದೂರವಾಣಿ ಸಂಖ್ಯೆ: 0820-2574892) ಕಚೇರಿಯನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.