ಸೆ.28ರಂದು ರಾಜ್ಯ ಮಟ್ಟದ ಸಂವಾದ ಕಾರ್ಯಕ್ರಮ
ಉಡುಪಿ, ಸೆ.26: ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಹಯೋಗದೊಂದಿಗೆ ಕೇಂದ್ರ/ರಾಜ್ಯ ಸರಕಾರವು ಜಾರಿಗೆ ತಂದಿರುವ ಸಹಕಾರ ಇಲಾಖೆಯ ಕಾನೂನು ತಿದ್ದುಪಡಿಗಳ ಕಾನೂನಿನ ತೊಡಕಿನ ಬಗ್ಗೆ ನೈಜತೆಯ ಅರಿವನ್ನು ಸರಕಾರ, ಜನಪ್ರತಿನಿಧಿ, ಇಲಾಖಾಧಿಕಾರಿಗಳಿಗೆ ತಿಳಿಯಪಡಿಸುವ ನಿಟ್ಟಿನಲ್ಲಿ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಗಳು, ಮುಖ್ಯ ಕಾರ್ಯನಿರ್ವಹಣಾಧಿ ಕಾರಿಗಳು ಹಾಗೂ ಸಿಬ್ಬಂದಿ ವರ್ಗದವರೊಂದಿಗೆ ರಾಜ್ಯ ಮಟ್ಟದ ಸಂವಾದ ಕಾರ್ಯಕ್ರಮವನ್ನು ಸೆ.28ರಂದು ಬೆಳಿಗ್ಗೆ 10ಗಂಟೆಗೆ ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಏರ್ಪಡಿಸಲಾಗಿದೆ.
ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ವರ್ಗದ ಸಹಕಾರಿಗಳು ಭಾಗವಹಿಸುವಂತೆ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.