ಸಿಎಂ ಪರಿಹಾರ ನಿಧಿಗೆ 17 ಕೋಟಿ ರೂ. ಚೆಕ್ ಸಲ್ಲಿಕೆ

Update: 2019-09-26 16:56 GMT

ಬೆಂಗಳೂರು, ಸೆ.26: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಮತ್ತು ವಿದ್ಯುತ್ ಸರಬರಾಜು ಕಂಪನಿಗಳ (ಎಸ್ಕಾಂ) ಅಧಿಕಾರಿ ಹಾಗೂ ನೌಕರರಿಂದ ಪ್ರವಾಹ ಸಂತ್ರಸ್ತರಿಗೆ 17 ಕೋಟಿ ರೂ. ಚೆಕ್ ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಯಿತು.

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿ ಚೆಕ್‌ಅನ್ನು ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್, ಕೆಪಿಟಿಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕಿ ಡಾ.ಎನ್.ಮಂಜುಳ, ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಗೌಡ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News