ಮೊದಲ ದಿನ ಮಳೆಗಾಹುತಿ
Update: 2019-09-26 22:52 IST
ವಿಜಯನಗರಂ, ಸೆ.26: ಮಂಡಳಿ ಅಧ್ಯಕ್ಷರ ಇಲೆವೆನ್ ಹಾಗೂ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಅಭ್ಯಾಸ ಪಂದ್ಯದ ಮೊದಲ ದಿನದಾಟ ಒಂದೂ ಎಸೆತ ಕಾಣದೇ ಮಳೆಗಾಹುತಿಯಾಯಿತು. ಗುರುವಾರ ಭಾರೀ ಮಳೆ ಸುರಿದ ಕಾರಣ ಪಂದ್ಯ ಆರಂಭಿಸಲು ಸಾಧ್ಯವಾಗಲಿಲ್ಲ.
ಭೋಜನ ವಿರಾಮಕ್ಕೆ ಮೊದಲು ಮೊದಲ ದಿನದಾಟವನ್ನು ರದ್ದುಪಡಿಸಲು ನಿರ್ಧರಿಸಲಾಯಿತು. ಅಕ್ಟೋಬರ್ 2 ರಿಂದ ವಿಶಾಖಪಟ್ಟಣದಲ್ಲಿ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯಕ್ಕಿಂತ ಮೊದಲು ದಕ್ಷಿಣ ಆಫ್ರಿಕಾ ಆಡಲಿರುವ ಏಕೈಕ ಅಭ್ಯಾಸ ಪಂದ್ಯ ಇದಾಗಿತ್ತು.
ಮೊದಲ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದ್ದು, ಹೀಗಾಗಿ ಮಂಡಳಿ ಅಧ್ಯಕ್ಷರ ಇಲೆವೆನ್ ತಂಡದ ನಾಯಕ ರೋಹಿತ್ ಅವರ ಮೇಲೆ ಎಲ್ಲರ ಗಮನ ನೆಟ್ಟಿತ್ತು. ಆರಂಭಿಕ ಆಟಗಾರ ಮಾಯಾಂಕ್ ಅಗರ್ವಾಲ್ ಹಾಗೂ ವೇಗದ ಬೌಲರ್ ಉಮೇಶ್ ಯಾದವ್ ಅವರ ಪ್ರದರ್ಶನ ಕೂಡ ಎಲ್ಲರ ಗಮನವನ್ನು ಸೆಳೆದಿತ್ತು.