×
Ad

ಶ್ರೀಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 2 ಕೋಟಿ ವೆಚ್ಚದ ಬ್ರಹ್ಮರಥ ಸಮರ್ಪಣೆ

Update: 2019-09-27 20:39 IST

ಉಡುಪಿ, ಸೆ.27: ಜಯ ಕರ್ನಾಟಕ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ಮತ್ತು ಯುವ ಉದ್ಯಮಿ ಅಜಿತ್ ಶೆಟ್ಟಿ ಸುಮಾರು ಎರಡು ಕೋಟಿ ರೂ. ವೆಚ್ಚದಲ್ಲಿ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಮರ್ಪಿಸಲಿರುವ ಬ್ರಹ್ಮರಥದ ಮೆರವಣಿಗೆ ಸೆ.30ರಂದು ಬೆಳಗ್ಗೆ 9ಗಂಟೆಗೆ ಕೋಟೇಶ್ವರದಿಂದ ಹೊರಡಲಿದೆ ಎಂದು ಜಯ ಕರ್ನಾಟಕ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಟೇಶ್ವರದಿಂದ ಹೊರಡುವ ಮೆರವಣಿಗೆಯು ಉಡುಪಿ -ಸುರತ್ಕಲ್- ಕದ್ರಿ- ಬಿ.ಸಿ.ರೋಡ್- ಉಪ್ಪಿನಂಗಡಿ- ಬಿಳಿನೆಲೆ ಮಾರ್ಗವಾಗಿ ಅ.2ರಂದು ಸಂಜೆ 6ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವನ್ನು ತಲುಪಲಿದೆ ಎಂದರು.
 2018ರ ಮಾ.15ರಂದು ಶಿಲ್ಪಗುರು ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ್ಯ ಈ ಶಿಲ್ಪದ ಕೆಲಸವನ್ನು ಆರಂಭಿಸಿದ್ದು, ಸೆಪ್ಟೆಂಬರ್ ತಿಂಗಳ ಅಂತ್ಯಕ್ಕೆ ಪೂರ್ಣಗೊಳಿಸಿದ್ದಾರೆ. ಈ ರಥದಲ್ಲಿ ಅಭೂತಪೂರ್ವ ಶಿಲ್ಪಕಲಾಕೃತಿಗಳನ್ನು ಅಳವಡಿಸಿಕೊ್ಳಲಾಗಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಗೌರವಾಧ್ಯಕ್ಷ ಶ್ರೀನಿವಾಸ ಶೆಟ್ಟಿಗಾರ್, ಗೌರವ ಸಲಹೆಗಾರ ಸುಧಾಕರ್ ರಾವ್, ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಅಮೀನ್, ಕರುಣಾಕರ ಪೂಜಾರಿ, ಶರತ್ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News