ಅ.4-13: ಪಿಲುಕುಳದಲ್ಲಿ ಕರಕುಶಲ ಮೇಳ
Update: 2019-09-27 21:46 IST
ಮಂಗಳೂರು, ಸೆ. 27: ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಅರ್ಬನ್ ಹಾಥ್‌ನಲ್ಲಿ ದಸರಾ ಉತ್ಸವದ ಅಂಗವಾಗಿ ಅ. 4ರಿಂದ 13ರವರೆಗೆ ಪಿಲಿಕುಳ ಕರಕುಶಲ ದಸರಾ ಮೇಳವನ್ನು ಆಯೋಜಿಸಲಾಗಿದೆ.
ಈ ಮೇಳಕ್ಕೆ ದೇಶದ ನಾನಾ ಭಾಗಗಳಿಂದ ಕುಶಲಕರ್ಮಿಗಳು ಭಾಗವಹಿಸುವ ನಿರೀಕ್ಷೆ ಇದೆ. ಆಸಕ್ತರು ಭಾಗವಹಿಸಬಹುದು ಎಂದು ಪ್ರಕಟನೆ ತಿಳಿಸಿದೆ.