×
Ad

ಶರದ್ ಪವಾರ್ ಬೆಂಬಲಕ್ಕೆ ನಿಂತ ರಾಹುಲ್ ಗಾಂಧಿ

Update: 2019-09-27 22:19 IST

ಹೊಸದಿಲ್ಲಿ, ಸೆ. 27: ಬಹುಕೋಟಿಯ ಎಂಎಸ್‌ಸಿ ಬ್ಯಾಂಕ್ ವಂಚನೆ ಆರೋಪಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಎನ್‌ಸಿಪಿ ವರಿಷ್ಠ ಶರದ್ ಪವಾರ್ ವಿರುದ್ಧ ಪ್ರಕರಣ ದಾಖಲಿಸಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶರದ್ ಪವಾರ್ ಅವರನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ.

 ‘‘ಕೇಂದ್ರ ಸರಕಾರ ಗುರಿ ಮಾಡುತ್ತಿರುವ ಪ್ರತಿಪಕ್ಷದ ಇತ್ತೀಚೆಗಿನ ನಾಯಕ ಶರದ್ ಪವಾರ್. ಮಹಾರಾಷ್ಟ್ರದಲ್ಲಿ ಚುನಾವಣೆಗೆ ಮುನ್ನ ಈ ಘಟನೆ ನಡೆದಿರುವುದರಿಂದ ರಾಜಕೀಯ ಅವಕಾಶವಾದದ ದುರ್ನಾತ ಬರುತ್ತಿದೆ’’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಜಾರಿ ನಿರ್ದೇಶನಾಲಯದ ಪ್ರಕರಣದ ಹಿನ್ನೆಲೆಯಲ್ಲಿ ರಾಜಕೀಯ ಉದ್ದೇಶ ಇದೆ. ಆದರೆ, ಹೊಸದಿಲ್ಲಿಯ ಮುಂದೆ ತಾನು ತಲೆಬಾಗಲಾರೆ ಎಂದು ಶರದ್ ಪವಾರ್ ಹೇಳಿದ್ದರು. ಆದರೆ, ಬಾಂಬೆ ಉಚ್ಚ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

ಅಣ್ಣಾ ಹಜಾರೆ ಅಚ್ಚರಿ

ಬಹುಕೋಟಿ ರೂಪಾಯಿಯ ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ ಹಗರಣದಲ್ಲಿ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರ ಹೆಸರು ಕೇಳಿ ಬಂದಿರುವುದಕ್ಕೆ ಸಾಮಾಜಿಕ ಹೋರಾಟಗಾರ ಅಣ್ಣಾ ಹಝಾರೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. ‘‘ನನ್ನಲ್ಲಿ ಪ್ರಕರಣ ಬಂದಾಗ, ಅಲ್ಲೆಲ್ಲಿಯೂ ಶರದ್ ಪವಾರ್ ಅವರ ಹೆಸರು ಇರಲಿಲ್ಲ. ಅನಂತರ ಅವರ ಹೆಸರು ಹೇಗೆ ಬಂತು, ಯಾರು ಅವರ ಹೆಸರನ್ನು ಪ್ರಸ್ತಾಪಿಸಿದರು, ಎಲ್ಲ ವಿಚಾರಗಳು ಅವರಿಗೆ ಮಾತ್ರ ಗೊತ್ತು’’ ಎಂದು ಅಣ್ಣಾ ಹಝಾರೆ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News