ಬಂದ್ ಪ್ರಶ್ನಿಸಿ ಪಿಐಎಲ್: ಕಾಂಗ್ರೆಸ್, ಬಿಜೆಪಿಗೆ ಹೈಕೋರ್ಟ್ ನೋಟಿಸ್

Update: 2019-09-27 16:51 GMT

ಬೆಂಗಳೂರು, ಸೆ.27: ಕಳೆದ ವರ್ಷ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಂದ್ ಆಚರಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಹಾಗೂ ಕನ್ನಡ ಪರ ಸಂಘಟನೆಗಳಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. 

ಈ ಕುರಿತು ರಾಜಾಜಿನಗರದ ಶ್ರದ್ಧಾ ಪೋಷಕರ ಸಂಘ, ನಾಗರಾಜ್ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ನ್ಯಾಯಪೀಠವು ರಾಜಕೀಯ ಪಕ್ಷಗಳು, ಕನ್ನಡ ಪರ ಸಂಘಟನೆಗಳಿಗೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿತು. ಡಿಕೆಶಿ ಬಂಧನದ ಬಂಧನದ ಹಿನ್ನೆಲೆಯಲ್ಲಿ ಕನಕಪುರ, ರಾಮನಗರ ಸೇರಿ ಇತರೆ ಜಿಲ್ಲೆಗಳಲ್ಲಿ ಆಗಿರುವ ನಷ್ಟದ ಕುರಿತು ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡಲು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶಿಸಿ, ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News