×
Ad

ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ತ್ಯಾಗಂಗೆ ಅಭಿನಂದನಾ ಸಮಾರಂಭ

Update: 2019-09-27 22:55 IST

ಕೊಣಾಜೆ: ತಮ್ಮ ವೃತ್ತಿಯೊಂದಿಗೆ ತ್ಯಾಗ ಮನೋಭಾವ, ಸಮಾಜಮುಖಿ ಚಿಂತನೆ, ಪರೋಪಕಾರಿ ಮನೋಭಾವವನ್ನು ಹೊಂದಿ ಸೇವೆಯನ್ನು ಸಲ್ಲಿಸಿದರೆ ಅದಕ್ಕೆ ಉತ್ತಮ ಪ್ರತಿಫಲ ಖಂಡಿತಾ ಸಿಗುತ್ತದೆ. ಇದಕ್ಕೆ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ತ್ಯಾಗಂ ಅವರೇ ಸಾಕ್ಷಿಯಾಗಿದ್ದಾರೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರು ಹೇಳಿದರು. 

 ಅವರು ಸಾರ್ವಜನಿಕ ಅಭಿನಂದನಾ ಸಮಿತಿ ಮತ್ತು ಮಂಗಳೂರು ದಕ್ಷಿಣ ವಲಯ ರಾಜ್ಯದ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಂಟಿ ಆಶ್ರಯದಲ್ಲಿ ಶುಕ್ರವಾರ ಕೊಣಾಜೆ ವಿಶ್ವಮಂಗಳ ಶಾಲೆಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತ ದೈಹಿಕ ಶಿಕ್ಷಣ ಶಿಕ್ಷಕ ಅವರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

 ತಾಲೂಕು ಪಂ. ಅಧ್ಯಕ್ಷ ಮಹಮ್ಮದ್ ಮೋನು ಅವರು ಮಾತನಾಡಿ, ಶಾಲೆಯಲ್ಲಿ ಮಕ್ಕಳ ಪಠ್ಯ ಶಿಕ್ಷಣದ ಒತ್ತಡವನು ನಿವಾರಿಸುವ ಮೂಲಕ ಸತ್ಪ್ರಜೆಗಳನ್ನಾಗಿಸುವ ದೈಹಿಕ ಶಿಕ್ಷಣ ಶಿಕ್ಷಕರು ದೇಶದ ಆಸ್ತಿ. ಮಂಗಳೂರು ದಕ್ಷಿಣ ವಲಯ ವ್ಯಾಪ್ತಿಯಲ್ಲಿರುವ ದೈಹಿಕ ಶಿಕ್ಷಣ ಶಿಕ್ಷಕರು ಶಾಲೆಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಂಗಳ ಸೇವಾ ಟ್ರಸ್ಟ್ ನ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಪ್ರಸಾದ್ ರೈ  ಕಲ್ಲಿಮಾರ್, ನಿವೃತ್ತ ಮುಖ್ಯ ಶಿಕ್ಷಕ ರವೀಂದ್ರ ರೈ ಕಲ್ಲಿಮಾರ್, ಉದ್ಯಮಿ ಅಬ್ದುಲ್ ನಾಸಿರ್, ಹರೇಕಳ ಹಾಜಬ್ಬ, ತಾಲೂಕು ಪಂ. ಸದಸ್ಯೆ ಪದ್ಮಾವತಿ ಪೂಜಾರಿ, ಕೊಣಾಜೆ ಗ್ರಾಮ ಪಂ. ಅಧ್ಯಕ್ಷ ನಝರ್ ಷಾ, ಉಪಾಧ್ಯಕ್ಷೆ ಲಲಿತಾ ಎಸ್.ರಾವ್, ವಿಷ್ಣು ಹೆಬ್ಬಾರ್, ವಿಶ್ವಮಂಗಳ ಸಂಸ್ಥೆಯ ಕಾರ್ಯದರ್ಶಿ ವಿನಯ ರಜತ್ ಮೊದಲಾದವರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News