ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಶಂಕರಗೌಡ ಪಾಟೀಲ್ ನೇಮಕ
Update: 2019-09-27 22:59 IST
ಬೆಂಗಳೂರು, ಸೆ. 27: ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯನ್ನಾಗಿ ಬೆಳಗಾವಿಯ ಶಂಕರಗೌಡ ಐ.ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಅಲ್ಲದೆ, ಅವರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ ಕಲ್ಪಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ ಆರ್.ಎಸ್. ಶಿವಕುಮಾರ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.