×
Ad

ಅಥ್ಲೆಟಿಕ್ಸ್ ಚ್ಯಾಂಪಿಯನ್‍ಶಿಪ್‍: ಆಳ್ವಾಸ್ ಕಾಲೇಜು ಚಾಂಪಿಯನ್

Update: 2019-09-27 23:01 IST

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ ಹಾಗೂ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಸಹಯೋಗದಲ್ಲಿ ಮೂಡಬಿದಿರೆಯ ಸ್ವರಾಜ್ ಮೈದಾನದಲ್ಲಿನಡೆದ 39ನೇ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್  ಕಾಲೇಜು ಮತ್ತು ಭಿನ್ನ ಸಾಮರ್ಥ್ಯ ದ ಮಕ್ಕಳ ಅಥ್ಲೆಟಿಕ್ಸ್ ಚ್ಯಾಂಪಿಯನ್‍ಶಿಪ್‍ನಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಸಮಗ್ರ ಒಟ್ಟು 500 ಅಂಕಗಗಳೊಂದಿಗೆ ವೀರಾ ಗ್ರಣಿಯಾಗಿ ಹೊರಹೊಮ್ಮಿತು.

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಡಾ.ಪಿ. ಸುಬ್ರಮಣ್ಯ.ಎಡಪಡಿತ್ತಾಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಮೂಡುಬಿದಿರೆಯು ಎಲ್ಲಾ ವಿಚಾರಗಳಲ್ಲೂ ವೈಶಿಷ್ಟ್ಯತೆಯನ್ನು ಹೊಂದಿದೆ. ಆಳ್ವಾಸ್ ಕಾಲೇಜು ಮಂಗಳೂರು ವಿಶ್ವವಿದ್ಯಾನಿಲಯ ಅವಿಭಾಜ್ಯ ಅಂಗವಾಗಿ, ರಾಷ್ಟ್ರೀಯ ಮಟ್ಟದಲ್ಲಿಮಂಗಳೂರು ವಿಶ್ವವಿದ್ಯಾನಿಲಯ ಸಾಧನೆ ಮೆರೆಯಲು ಸದಾ ಸಹಕರಿಸಿದೆ.ಪ್ರತಿಯೊಬ್ಬರ ಗೆಲುವಿಗೂ ಅಭ್ಯಾಸದಜತೆಗೆ ಪ್ರೇರಣೆ, ಸ್ಫೂರ್ತಿಅತ್ಯವಶ್ಯಕ ಎಂದರು.

ಮಾಜಿ ಶಾಸಕ ಅಭಯಚಂದ್ರ ಜೈನ್ ಮುಖ್ಯಅತಿಥಿಯಾಗಿ ಮಾತನಾಡಿ, ಎಲ್ಲಾ ಕ್ರೀಡಾಪಟುಗಳು ರಾಜ್ಯ- ರಾಷ್ಟ್ರಮಟ್ಟದಲ್ಲಿ ತಮ್ಮ ಸಾಧನೆಯನ್ನು ಮೆರೆಯಬೇಕು ಎಂದು ಶುಭ ಹಾರೈಸಿದರು.

ಮಂಗಳೂರು ವಿವಿ ಕ್ರೀಡಾಪಟುಗಳಿಗೆ ಸದಾ ಸಹಕಾರ ನೀಡುತ್ತಾ, ಅವರ ಏಳಿಗೆಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ.ಆಳ್ವಾಸ್ ಶಿಕ್ಷಣ ಸಂಸ್ಥೆಯೂಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ವರ್ಷಕ್ಕೆ 8ಕೋಟಿಯಷ್ಟು ಹಣವನ್ನುಕ್ರೀಡೆಗೆ ಮೀಸಲಿಟ್ಟಿದೆಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷಡಾ.ಎಂ ಮೋಹನ್ ಆಳ್ವ ಹೇಳಿದರು.

ಕಾರ್ಯಕ್ರಮದಲ್ಲಿಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್, ಮಂಗಳೂರು ವಿಶ್ವವಿದ್ಯಾನಿಲಯದದೈಹಿಕ ಶಿಕ್ಷಣ ನಿರ್ದೇಶಕಡಾ.ಕಿಶೋರ್‍ಕುಮಾರ್.ಸಿ.ಕೆ ಉಪಸ್ಥಿತರಿದ್ದರು. ಕೂಟದಾಖಲೆಯನ್ನು ಸಾಧಿಸಿದ ವಿದ್ಯಾರ್ಥಿಗಳಿಗೆ ತಲಾರೂಪಾಯಿ 2000 ನಗದು ಬಹುಮಾನ ನೀಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News