ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Update: 2019-09-27 18:37 GMT

ವಿದ್ಯಾರ್ಥಿವೇತನ

(ಅರ್ಹತೆ ಮತ್ತು ಆದಾಯ ಆಧಾರಿತ):

ಶ್ಯಾಫ್ಲರ್ ಇಂಡಿಯಾ ಹೋಪ್ ಇಂಜಿನಿಯರಿಂಗ್ ಸ್ಕಾಲರ್‌ಶಿಪ್ 2019-20

 ವಿವರ: ಆರ್ಥಿಕ ನೆರವಿನ ಅಗತ್ಯವಿರುವ ಪ್ರತಿಭಾನ್ವಿತ ಇಂಜಿನಿಯರಿಂಗ್ ವಿದ್ಯಾರ್ಥಿ ಗಳಿಗೆ ಪದವಿ ಅಧ್ಯಯನ ಮುಂದುವರಿಸಲು ಶ್ಯಾಫ್ಲರ್ ಇಂಡಿಯಾ ನೀಡುವ ಸ್ಕಾಲರ್‌ಶಿಪ್. ಈ ಯೋಜನೆಯಡಿ ಆಯ್ದ ಪ್ರತಿಭಾನ್ವಿತರಿಗೆ ಶೈಕ್ಷಣಿಕ ವೆಚ್ಚ ಭರಿಸಲು ಸ್ಕಾಲರ್‌ಶಿಪ್ ನೀಡಲಾಗುವುದು.

 ಅರ್ಹತೆ: ಗುಜರಾತ್, ಮಹಾರಾಷ್ಟ್ರ ಮತ್ತು ತಮಿಳುನಾಡಿನ ವಿದ್ಯಾರ್ಥಿಗಳು, 12ನೇ ತರಗತಿ(ವಿಜ್ಞಾನ)ಯಲ್ಲಿ ಕನಿಷ್ಠ ಶೇ. 60 ಅಂಕ ಗಳಿಸಿದ್ದು ಮಾನ್ಯತೆ ಪಡೆದ ಭಾರತದ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಪದವಿ ತರಗತಿಗೆ ನೋಂದಣಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ 5 ಲಕ್ಷ ರೂ.ಗಿಂತ ಕಡಿಮೆ ಇರಬೇಕು.

ನೆರವು: ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ 75 ಸಾವಿರ ರೂ. ನೀಡಲಾಗುವುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟಂಬರ್ 30, 2019

ಅರ್ಜಿ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಜಾಲತಾಣ: http://www.b4s.in/bharati/SIHE1

***********************

ವಿದ್ಯಾರ್ಥಿವೇತನ

(ಅರ್ಹತೆ ಮತ್ತು ಆದಾಯ ಆಧಾರಿತ):

ಪ್ರತಿಭಾನ್ವಿತ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳಿಗೆ ಒಎನ್‌ಜಿಸಿ ಸ್ಕಾಲರ್‌ಶಿಪ್ 2019-20

ವಿವರ: ವೃತ್ತಿಪರ ಕೋರ್ಸ್‌ಗಳಲ್ಲಿ ಉನ್ನತ ಅಧ್ಯಯನ ನಡೆಸಲು ಬಯಸುವ ಎಸ್ಸಿ/ಎಸ್ಟಿ ಸಮುದಾಯದ ವಿದ್ಯಾರ್ಥಿಗಳಿಂದ ಸ್ಕಾಲರ್‌ಶಿಪ್‌ಗೆ ಒಎನ್‌ಜಿಸಿ ಅರ್ಜಿ ಆಹ್ವಾನಿಸಿದೆ. ಅಲ್ಪಸಂಖ್ಯಾತ ಸಮುದಾಯದ ಬಡ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಅಧ್ಯಯನಕ್ಕೆ ಆರ್ಥಿಕ ನೆರವು ನೀಡುವ ಉದ್ದೇಶದ ಸ್ಕಾಲರ್‌ಶಿಪ್.

 ಅರ್ಹತೆ: ಇಂಜಿನಿಯರಿಂಗ್, ಎಂಬಿಬಿಎಸ್, ಜಿಯಾಲಜಿ/ಜಿಯೊಫಿಸಿಕ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಅಥವಾ ಎಂಬಿಎ ಪದವಿಯ ಪ್ರಥಮ ವರ್ಷಕ್ಕೆ ನೋಂದಣೆಯಾಗಿರುವ ಎಸ್ಸಿ/ಎಸ್ಟಿ ಸಮುದಾಯದ ವಿದ್ಯಾರ್ಥಿಗಳು. ಅರ್ಜಿ ಸಲ್ಲಿಸುವವರು 30 ವರ್ಷ ಮೀರಿರಬಾರದು ಹಾಗೂ 12ನೇ ತರಗತಿ / ಪದವಿ ಪರೀಕ್ಷೆಯಲ್ಲಿ ಕನಿಷ್ಠ ಶೇ.60 ಅಂಕ ಗಳಿಸಿರಬೇಕು. ಕುಟುಂಬದ ವಾರ್ಷಿಕ ಆದಾಯ 4. 5 ಲಕ್ಷ ರೂ. ಅಥವಾ ಕಡಿಮೆ ಇರಬೇಕು.

 ನೆರವು: ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ 48 ಸಾವಿರ ರೂ. ನೀಡಲಾಗುವುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 15, 2019

ಅರ್ಜಿ: ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಜಾಲತಾಣ: http://www.b4s.in/bharati/ OST2

*****************

 ವಿದ್ಯಾರ್ಥಿವೇತನ

(ಅಗತ್ಯ ಆಧಾರಿತ):

ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರಿ-ಮೆಟ್ರಿಕ್ ಸ್ಕಾಲರ್‌ಶಿಪ್ 2019-20

ವಿವರ: ಭಾರತ ಸರಕಾರದ ಅಂಗವಿಕಲ ವ್ಯಕ್ತಿಗಳ ಸಬಲೀಕರಣ ಇಲಾಖೆಯು ದೈಹಿಕ ಅಂಗವಿಕಲತೆ ಹೊಂದಿರುವ ವಿದ್ಯಾರ್ಥಿಗಳಿಗೆ ಮಾಧ್ಯಮಿಕ ಶಿಕ್ಷಣ ಪಡೆಯಲು ಆರ್ಥಿಕ ನೆರವು ನೀಡುತ್ತಿದೆ. ಶೈಕ್ಷಣಿಕ ವೆಚ್ಚ ಭರಿಸಲು ಸ್ಕಾಲರ್‌ಶಿಪ್ ನೀಡಲಾಗುವುದು.

ಅರ್ಹತೆ: ಶೇ.40ಕ್ಕಿಂತ ಅಧಿಕ ಅಂಗವಿಕಲತೆ ಹೊಂದಿರುವ , ಈಗ 9 ಅಥವಾ 10ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಈ ಸ್ಕಾಲರ್‌ಶಿಪ್‌ಗೆ ಅರ್ಜಿ ಸಲ್ಲಿಸಬಹುದು. ಕುಟುಂಬದ ವಾರ್ಷಿಕ ವರಮಾನ 2.50 ಲಕ್ಷ ರೂ.ಗಿಂತ ಕಡಿಮೆ ಇರಬೇಕು.

  ನೆರವು: ಆಯ್ಕೆಯಾದ ಅಭ್ಯರ್ಥಿಗಳಿಗೆ ನಿರ್ವಹಣೆ ಭತ್ತೆ ತಿಂಗಳಿಗೆ 800 ರೂ., ಪುಸ್ತಕ ಅನುದಾನ ವರ್ಷಕ್ಕೆ 1000 ರೂ. ಮತ್ತು ಅಂಗವಿಕಲತೆ ಭತ್ತೆ ವರ್ಷಕ್ಕೆ 2000ರೂ.ನಿಂದ 4000 ರೂ.ವರೆಗೆ ನೀಡಲಾಗುವುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 15, 2019

ಅರ್ಜಿ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಜಾಲತಾಣ: http://www.b4s.in/bharati/PSF1

*******************

ವಿದ್ಯಾರ್ಥಿವೇತನ

(ಅರ್ಹತೆ ಮತ್ತು ಆದಾಯ ಆಧಾರಿತ):

ರಾಷ್ಟ್ರೀಯ ಅರ್ಹತೆ ಹಾಗೂ ಆದಾಯ ಸ್ಕಾಲರ್‌ಶಿಪ್ ಯೋಜನೆ 2019-20

 ವಿವರ: 8ನೇ ತರಗತಿ ಬಳಿಕ ಶಿಕ್ಷಣ ಮುಂದುವರಿಸಲು ಆರ್ಥಿಕ ನೆರವಿನ ಅಗತ್ಯವಿರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವೆಚ್ಚ ಭರಿಸಲು ನೀಡುವ ಸ್ಕಾಲರ್‌ಶಿಪ್. ಭಾರತ ಸರಕಾರದ ಸಾಕ್ಷರತೆ ಮತ್ತು ಶಾಲಾ ಶಿಕ್ಷಣ ಇಲಾಖೆ ಭಾರತದಾದ್ಯಂತದ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲು ನೀಡುವ ಸ್ಕಾಲರ್‌ಶಿಪ್ ಇದಾಗಿದೆ.

ಅರ್ಹತೆ: ಕನಿಷ್ಠ ಶೇ.55 ಅಂಕಗಳೊಂದಿಗೆ (ಎಲ್ಲಾ ವರ್ಗದವರಿಗೂ ಕಡ್ಡಾಯ) 7ನೇ ತರಗತಿ, ಕನಿಷ್ಠ ಶೇ.55 ಅಂಕಗಳೊಂದಿಗೆ (ಎಸ್ಸಿ/ಎಸ್ಟಿ ವಿದ್ಯಾರ್ಥಿಗಳಿಗೆ ಶೇ.5 ರಿಯಾಯಿತಿ)8ನೇ ತರಗತಿ ತೇರ್ಗಡೆಯಾಗಿ 9ನೇ ತರಗತಿಗೆ ನೋಂದಣಿಯಾಗಿರುವ ವಿದ್ಯಾರ್ಥಿಗಳು. ಕುಟುಂಬದ ವಾರ್ಷಿಕ ಆದಾಯ 1.50 ಲಕ್ಷ ರೂ.ಗಿಂತ ಕಡಿಮೆ ಇರಬೇಕು.

ನೆರವು: ಆಯ್ಕೆಯಾದ ವಿದ್ಯಾರ್ಥಿಗಳಿಗೆ ಒಟ್ಟು 12,000 ರೂ.ಯನ್ನು ತಿಂಗಳ ಕಂತಿನಲ್ಲಿ ನೀಡಲಾಗುವುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 15, 2019

ಅರ್ಜಿ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಜಾಲತಾಣ: http://www.b4s.in/bharati/NMC6

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News