ವಿಧಾನ ಸಭಾ ಚುನಾವಣೆಗಳ ಅಭ್ಯರ್ಥಿಗಳ ಆಯ್ಕೆಯಲ್ಲಿ ರಾಹುಲ್ ಗಾಂಧಿ ಪಾತ್ರವಿಲ್ಲ

Update: 2019-09-28 10:49 GMT

ಹೊಸದಿಲ್ಲಿ, ಸೆ.28: ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮುಂದಿನ ತಿಂಗಳ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಅಧಿಕಾರವನ್ನು ಹೊಂದಿರುವುದಿಲ್ಲ. 

ಲೋಕಸಬಾ ಚುನಾವಣೆಯಲ್ಲಿ ಪಕ್ಷ ಹೀನಾಯ ಸೋಲು ಅನುಭವಿಸಿದ ಬಳಿಕ ನೈತಿಕ ಹೊಣೆ ಹೊತ್ತು ಪಕ್ಷದ ಅಧ್ಯಕ್ಷ ಸ್ಥಾನವನ್ನು ತ್ಯಜಿಸಿದ್ದರು. ಬಳಿಕ ಅಭ್ಯರ್ಥಿಗಳ ಆಯ್ಕೆ ಸಭೆಗಳಲ್ಲಿ ಭಾಗವಹಿಸುವುದನ್ನು ಅಥವಾ ಅಲ್ಲಿ ತೆಗೆದುಕೊಂಡ ನಿರ್ಧಾರಗಳಲ್ಲಿ ಹಸ್ತಕ್ಷೇಪ ವಹಿಸುವುದರಿಂದ ದೂರ ಉಳಿದಿದ್ದಾರೆ

“ರಾಹುಲ್ ಗಾಂಧಿ ಟಿಕೆಟ್ ಹಂಚಿಕೆಯಲ್ಲಿ ಭಾಗಿಯಾಗಲು ಬಯಸುವುದಿಲ್ಲ. ರಾಜ್ಯ ನಾಯಕರೊಂದಿಗೆ ಸಮಾಲೋಚಿಸಿ ಪಕ್ಷವು ಇದನ್ನು ನಿರ್ಧರಿಸುತ್ತದೆ ಮತ್ತು ಅವರ ಆಯ್ಕೆಗಳ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತದೆ, ’’ ಎಂದು ಅಭ್ಯರ್ಥಿಗಳ ಆಯ್ಕೆ ಸಮಿತಿ ಸದಸ್ಯರೊಬ್ಬರು ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ನ ಕೇಂದ್ರ ಚುನಾವಣಾ ಸಮಿತಿ ಅಥವಾ ಸಿಇಸಿಯ ಎರಡು ಸಭೆಗಳಲ್ಲಿ ರಾಹುಲ್ ಭಾಗವಹಿಸಲಿಲ್ಲ. ರಾಹುಲ್ ಗಾಂಧಿ 2010 ರಿಂದ ಸಿಇಸಿ ಸದಸ್ಯರಾಗಿದ್ದಾರೆ. ಆದರೆ,ರಾಹುಲ್ ಗಾಂಧಿ ಪ್ರಚಾರಕರಾಗಿ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.

"ರಾಹುಲ್ ನೈತಿಕ ಆಧಾರದ ಮೇಲೆ ಹುದ್ದೆ ತ್ಯಜಿಸಿದ್ದರೂ, ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿಲ್ಲ ಎಂದು ಇದರ ಅರ್ಥವಲ್ಲ. ವಾಸ್ತವವಾಗಿ, ಅವರು ಹಿಂದೆಂದಿಗಿಂತಲೂ ಹೆಚ್ಚು ಪ್ರಬಲ ಅಭಿಯಾನವನ್ನು ಮುಂದುವರಿಸಲು ನಮಗೆ ಸಹಾಯ ಮಾಡುತ್ತಿದ್ದಾರೆ, ’’ ಎಂದು ಕೇಂದ್ರ ಚುನಾವಣಾ ಪ್ರಾಧಿಕಾರದ ಸದಸ್ಯ ಕೆ.ಎಚ್. ಮುನಿಯಪ್ಪ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News