ಬಿಹಾರ ಕೋರ್ಟ್‍ನಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಕೇಸ್

Update: 2019-09-28 13:42 GMT

ಪಾಟ್ನಾ: ಬಿಹಾರದ ಮುಝಫ್ಫರಪುರ್ ಜಿಲ್ಲೆಯ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಶನಿವಾರ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಪ್ರಕರಣ ದಾಖಲಾಗಿದೆ. ಸುಧೀರ್ ಕುಮಾರ್ ಓಝಾ ಎಂಬ ವಕೀಲ ಈ ಪ್ರಕರಣ ದಾಖಲಿಸಿದ್ದಾರೆ. ಇಮ್ರಾನ್ ಖಾನ್ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಹಾಗೂ  ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ವಿರುದ್ಧ ಅಣ್ವಸ್ತ್ರ ಯುದ್ಧದ ಬೆದರಿಕೆಯನ್ನೂ ಒಡ್ಡಿದ್ದಾರೆ ಎಂದು ಅವರು ಈ ಪ್ರಕರಣ ದಾಖಲಿಸಿದ್ದಾರೆ.

ತನ್ನ ದೂರಿನ ಆಧಾರದಲ್ಲಿ  ಇಮ್ರಾನ್ ವಿರುದ್ಧ ಎಫ್‍ಐಆರ್ ದಾಖಲಿಸಲು ಆದೇಶಿಸಬೇಕೆಂದು ವಕೀಲ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿ ಹಿನ್ನೆಲೆಯಲ್ಲಿ ಪಾಕ್ ಪ್ರಧಾನಿಯ ಹೇಳಿಕೆ ಜನರನ್ನು ಪ್ರಚೋದಿಸಿ ದೇಶದಲ್ಲಿ ಸಾಮರಸ್ಯ ಕದಡುವುದು ಎಂದು ತಮ್ಮ ಅಪೀಲಿನಲ್ಲಿ ಓಝಾ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News