ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
Update: 2019-09-28 21:25 IST
ಹೆಬ್ರಿ, ಸೆ.28: ಅನಾರೋಗ್ಯದಿಂದ ಬಳಲುತ್ತಿದ್ದ ಕಳ್ತೂರು ಗ್ರಾಮದ ಕಾಯ್ನಾಡಿ ನಿವಾಸಿ ನರಸಿಂಹ ಎಂಬವರ ಪತ್ನಿ ಲತಾ(39) ಎಂಬವರು ಮಾನಸಿಕ ಖಿನ್ನತೆಗೊಳಗಾಗಿ ಸೆ.28ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ: ವೈಯಕ್ತಿಕ ಕಾರಣದಿಂದ ಮನನೊಂದ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿ ವೆಂಕಟ ಪೂಜಾರಿ ಎಂಬವರ ಮಗಳು ಜಯಂತಿ ಪೂಜಾರ್ತಿ(37) ಎಂಬವರು ಸೆ.27ರಂದು ಬೆಳಗ್ಗೆ ಮನೆಯ ಸಮೀಪದ ಬಾವಿಯ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.