ಅಪಘಾತ: ಗಾಯಾಳು ಎನ್‌ಎಂಪಿಟಿ ಉದ್ಯೋಗಿ ಮೃತ್ಯು
Update: 2019-09-28 22:49 IST
ಮಂಗಳೂರು, ಸೆ.28: ಅಪರಿಚಿತ ವಾಹನ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಎನ್‌ಎಂಪಿಟಿ ಉದ್ಯೋಗಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಆಕಾಶಭವನ ನಿವಾಸಿ ಕೆ.ನೈನಾರ್ (58) ಮೃತರು.
ಅವರು ಎನ್‌ಎಂಪಿಟಿಯಲ್ಲಿ ಸಿಗ್ನಲ್ ಮನ್‌ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ರಾತ್ರಿ 8 ಗಂಟೆಗೆ ಮನೆಯಿಂದ ಎನ್‌ಎಂಪಿಟಿಗೆ ಕರ್ತವ್ಯಕ್ಕೆ ಹಾಜರಾಗಲು ತೆರಳುತ್ತಿದ್ದರು. ಈ ವೇಳೆ ಅಪರಿಚಿತ ವಾಹನವೊಂದು ಢಿಕ್ಕಿಯಾಗಿ ನೈನಾರ್ ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಗಾಯಾಳುವನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಮಂಗಳೂರು ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.