×
Ad

1 ಕೋಟಿ ರೂ. ಮೌಲ್ಯದ ನಿಷೇಧಿತ ನೋಟು ವಶ; ಮೂವರ ಬಂಧನ

Update: 2019-09-28 23:13 IST

ಔರಂಗಾಬಾದ್ (ಮಹಾರಾಷ್ಟ್ರ), ಸೆ. 28: ಒಂದು ಕೋಟಿ ರೂಪಾಯಿ ಮೌಲ್ಯದ ನಿಷೇಧಿತ ನೋಟುಗಳು ಇದ್ದ ಆರೋಪದಲ್ಲಿ ಮಹಾರಾಷ್ಟ್ರ ಪೊಲೀಸರು ಶುಕ್ರವಾರ ಔರಂಗಾಬಾದ್‌ನ ಉಸ್ಮಾನಪುರ ಪ್ರದೇಶದಿಂದ ಮೂವರನ್ನು ಬಂಧಿಸಿದ್ದಾರೆ. ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ರಾಹುಲ್ ಖಡೆ, ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಇಲ್ಲಿನ ಪೊಲೀಸ್ ತಪಾಸಣಾ ಕೇಂದ್ರದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಯಿತು.

ಅವರ ವಶದಲ್ಲಿದ್ದ ನಿಷೇಧಿತ 500 ಹಾಗೂ 1000 ರೂಪಾಯಿಗಳ ನೋಟುಗಳನ್ನು ವಶಪಡಿಸಿಕೊಳ್ಳಲಾಯಿತು ಎಂದಿದ್ದಾರೆ. ನಿರ್ದಿಷ್ಟ ಬ್ಯಾಂಕ್ ನೋಟುಗಳ ಕಾಯ್ದೆ ಅಡಿ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ದಿಶೆಯಲ್ಲಿ ತನಿಖೆ ನಡೆಯುತ್ತಿದೆ ಎಂದು ಖಡೆ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News