ಉಡುಪಿ: ಗಾಂಧೀ ಜಯಂತಿ ಆಚರಣೆ
Update: 2019-09-29 17:41 IST
ಉಡುಪಿ ಸೆ.29: ಜಿಲ್ಲಾಡಳಿತ ಉಡುಪಿ, ಜಿಲ್ಲಾ ಪಂಚಾಯತ್, ನಗರಸಭೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಯವರ 150ನೆ ಜನ್ಮ ದಿನಾಚರಣೆಯನ್ನು ಅ.2ರಂದು ಬೆಳಗ್ಗೆ 9 ಗಂಟೆಗೆ ಅಜ್ಜರಕಾಡು ಭುಜಂಗ ಪಾರ್ಕ್‌ನಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿರುವರು. ಬೆಳಗ್ಗೆ 8ಗಂಟೆಯಿಂದ ಗಾಂಧೀ ಭಜನೆ ಮತ್ತು 8.30ಕ್ಕೆ ಗಾಂಧೀಜಿ ಜೀವನ ಚೆರಿತ್ರೆ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಲಿದೆ.
ನಂತರ ಗಾಂಧೀ ಪ್ರತಿಮೆಗೆ ಮಾಲಾರ್ಪಣೆ ಮತುತಿ ಗೌರವ ಸಮರ್ಪಣೆ ಹಾಗೂ ಕಿರುಹೊತಿತಿಗೆ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಸಾಹಿತಿ ಹಾಗೂ ಗಾಂಧೀ ಚಿಂತಕ ದಯಾನಂದ ಕೆ.ಶೆಟ್ಟಿ ದೆಂದೂರು ವಿಶೇಷ ಉಪನ್ಯಾಸ ನೀಡಲಿರುವರು ಎಂದು ಪ್ರಕಟಣೆ ತಿಳಿಸಿದೆ.