×
Ad

ವಿದ್ಯಾರ್ಥಿವೇತನ ವಿತರಣಾ ಸಮಾರಂಭ

Update: 2019-09-29 19:42 IST

ಮಂಗಳೂರು, ಸೆ.29: ಕುದ್ರೋಳಿಯ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ದಿ.ದಾಮೋದರ ಆರ್. ಸುವರ್ಣ ಅವರ ಜನ್ಮದಿನಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವನ್ನು ಮುಜರಾಯಿ ಮೀನುಗಾರಿಕೆ ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು.

ಈ ಸಂದರ್ಭ ಮೂಡಬಿದಿರೆ ಶಾಸಕರಾದ ಉಮಾನಾಥ ಕೋಟ್ಯಾನ್, ಅಖಿಲ ಭಾರತ್ ಬಿಲ್ಲವ ಯೂನಿಯನ್‌ನ ಅಧ್ಯಕ್ಷ ನವೀನ್‌ಚಂದ್ರ ಡಿ. ಸುವರ್ಣ, ವಾರಿಜಾ ಡಿ. ಸುವರ್ಣ, ಲೋಕನಾಥ್, ವಸಂತ್‌ಕುಮಾರ್, ಸುಮಲತಾ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News