×
Ad

ಗೂಡ್ಸ್ ಆಟೊ ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು

Update: 2019-09-29 20:03 IST

ಬೆಂಗಳೂರು, ಸೆ.29: ಹಿಂದಿನಿಂದ ವೇಗವಾಗಿ ಬಂದ ಗೂಡ್ಸ್ ಆಟೊ ಢಿಕ್ಕಿ ಹೊಡೆದ ಪರಿಣಾಮ, ಸ್ಕೂಟರ್‌ನಲ್ಲಿ ಹೋಗುತ್ತಿದ್ದ ವೃದ್ಧರೊಬ್ಬರು ಸಾವನ್ನಪ್ಪಿರುವ ದುರ್ಘಟನೆ ಜೆಸಿ ರಸ್ತೆಯಲ್ಲಿ ನಡೆದಿದೆ ಎನ್ನಲಾಗಿದೆ.

ಪಾರ್ವತಿಪುರದ ಫತೀರುದ್ದೀನ್ (72) ಮೃತರು ಎಂದು ತಿಳಿದುಬಂದಿದೆ. ಶನಿವಾರ ಜೆಸಿ ರಸ್ತೆಯಲ್ಲಿ ಸ್ಕೂಟರ್‌ನಲ್ಲಿ ಎಸ್.ಪಿ. ರಸ್ತೆಗೆ ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಗೂಡ್ಸ್ ಆಟೊ ಢಿಕ್ಕಿ ಹೊಡೆದು ಕೆಳಗೆ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಅಪಘಾತವೆಸಗಿದ ಗೂಡ್ಸ್ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದು, ಆತನಿಗಾಗಿ ತೀವ್ರ ಶೋಧ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News