ಹಾಸನ: ರಸ್ತೆ ಅಪಘಾತಕ್ಕೆ ಬೈಕ್ ಸವಾರರಿಬ್ಬರು ಬಲಿ
Update: 2019-09-29 20:55 IST
ಹಾಸನ, ಸೆ.29: ಕಾರು-ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‍ನಲ್ಲಿದ್ದ ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ತಾಲೂಕಿನ ಕಿತ್ತಾನೆ ಬಳಿ ನಡೆದಿದೆ.
ಎರಡೂ ಕಡೆಯಿಂದ ವೇಗದಲ್ಲಿ ಚಲಿಸುತ್ತಿದ್ದ ವಾಹನಗಳ ನಿಯಂತ್ರಣ ತಪ್ಪಿದ ಪರಿಣಾಮ ಅಪಘಾತ ಸಂಭವಿಸಿದೆ. ಪರಿಣಾಮ ಬೈಕ್‍ನಲ್ಲಿದ್ದ ರವಿ (37) ಹಾಗೂ ರಮೇಶ್ (42) ಇಬ್ಬರೂ ಕೆಳಗೆ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.