ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ಅ.14ಕ್ಕೆ ನಿಗದಿಪಡಿಸಿದ ದಿಲ್ಲಿ ಹೈಕೋರ್ಟ್

Update: 2019-09-30 07:11 GMT

ಹೊಸದಿಲ್ಲಿ, ಸೆ.30: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ದಿಲ್ಲಿ ಹೈಕೋರ್ಟ್ ಅಕ್ಟೋಬರ್ 14ಕ್ಕೆ ನಿಗದಿಪಡಿಸಿದೆ.

ಶಿವಕುಮಾರ್ ಜಾಮೀನು ಅರ್ಜಿಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡುವಂತೆ ಜಾರಿ ನಿರ್ದೇಶನಾಲಯಕ್ಕೆ(ಈಡಿ)ಹೈಕೋರ್ಟ್ ನೋಟಿಸ್ ನೀಡಿದೆ.

 ಶಿವಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿರುವ ಈ.ಡಿ. ವಿಶೇಷ ಕೋರ್ಟ್ ಸೆ.27ರಂದು ಆದೇಶ ನೀಡಿತ್ತು. ಇದರ ಸಿಂಧುತ್ವ ಪ್ರಶ್ನಿಸಿ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News