ಮನ್ಸೂರ್ ಖಾನ್ ನ್ಯಾಯಾಂಗ ಬಂಧನ ಅ.14ರವರೆಗೆ ವಿಸ್ತರಣೆ

Update: 2019-09-30 14:46 GMT

ಬೆಂಗಳೂರು, ಸೆ.30: ಐಎಂಎ ಬಹುಕೋಟಿ ವಂಚನೆ ಹಗರಣದ ಪ್ರಮುಖ ಆರೋಪಿ ಮಹಮ್ಮದ್ ಮನ್ಸೂರ್ ಖಾನ್ ನ್ಯಾಯಾಂಗ ಬಂಧನವನ್ನು ಸೆಷನ್ಸ್ ಕೋರ್ಟ್ ಅ.14ರವರೆಗೂ ವಿಸ್ತರಿಸಿ ಆದೇಶ ಹೊರಡಿಸಿದೆ.

ಮನ್ಸೂರ್ ಖಾನ್ ಪೊಲೀಸ್ ಬಂಧನದ ಅವಧಿ ಸೆ.30ರಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಸೆಷನ್ಸ್ ಕೋರ್ಟ್‌ಗೆ ಮನ್ಸೂರ್ ಖಾನ್‌ನನ್ನು ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಶಿವಶಂಕರ್ ಬಿ. ಅಮರಣ್ಣನವರ್ ಆರೋಪಿಯ ನ್ಯಾಯಾಂಗ ಬಂಧನದ ಅವಧಿಯನ್ನು ಅ.14ರವರೆಗೆ ವಿಸ್ತರಿಸಿದ್ದಾರೆ.

ಪ್ರಮುಖ ಆರೋಪಿ ಮನ್ಸೂರ್ ಖಾನ್‌ನನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಈಡಿ ಅಧಿಕಾರಿಗಳ ಮುಂದೆ ವಿಚಾರಣೆ ವೇಳೆ, ಶಾರ್ಪ್ ಶೂಟರ್‌ಗಳಿಗೆ ತನ್ನನ್ನು ಕೊಲ್ಲಲು ಸುಪಾರಿ ನೀಡಲಾಗಿದೆ. ತಮ್ಮ ಮೇಲೆ ದಾಳಿ ನಡೆಯುವ ಸಾಧ್ಯತೆಯಿದೆ ಎಂದು ಕೂಡ ಹೇಳಿದ್ದ. ಅನಾರೋಗ್ಯದ ಕಾರಣದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ. ದುಬೈನಿಂದ್ ಹೊಸದಿಲ್ಲಿ ವಿಮಾನ ನಿಲ್ದಾಣಕ್ಕೆ ಬರುತಿದ್ದಂತೆಯೇ ಮನ್ಸೂರ್‌ನನ್ನು ಎಸ್‌ಐಟಿ ತಂಡ ವಶಕ್ಕೆ ಪಡೆದಿತ್ತು. ಮನ್ಸೂರ್ ಖಾನ್ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News