ಐಎಂಎ ವಂಚನೆ ಪ್ರಕರಣ: ಚಾರ್ಜ್‌ಶೀಟ್‌ನಲ್ಲಿ ನಾಲ್ವರ ಹೆಸರು ಕೈಬಿಟ್ಟ ಸಿಬಿಐ ?

Update: 2019-09-30 15:05 GMT

ಬೆಂಗಳೂರು, ಸೆ.30: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಚಾರ್ಜ್‌ಶೀಟ್‌ನಲ್ಲಿ ನಾಲ್ವರ ಹೆಸರನ್ನು ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಕೈಬಿಟ್ಟಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.

ಇತ್ತೀಚಿಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಪ್ರಾಥಮಿಕ ಹಂತದ ದೋಷಾರೋಪಪಟ್ಟಿ ಸಲ್ಲಿಸಿತ್ತು. ಆದರೆ, ಪಟ್ಟಿಯಲ್ಲಿ ಆರೋಪಿಗಳಾದ ಮಾಜಿ ಜಿಲ್ಲಾಧಿಕಾರಿ ಬಿ.ಎಂ.ವಿಜಯ ಶಂಕರ್, ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಎಲ್.ಸಿ.ನಾಗರಾಜ್, ಬಿಡಿಎ ಇಂಜಿನಿಯರ್ ಪಿ.ಡಿ.ಕುಮಾರ್ ಹಾಗೂ ಗ್ರಾಮಲೆಕ್ಕಿಗ ಮಂಜುನಾಥ್ ಹೆಸರನ್ನು ಕೈಬಿಟ್ಟಿದೆ ಎನ್ನಲಾಗಿದೆ.

ವಂಚನೆ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್ ಸೇರಿದಂತೆ ಒಟ್ಟು 26 ಮಂದಿ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿತ್ತು. ಆದರೆ, ಚಾರ್ಜ್‌ಶೀಟ್‌ನಲ್ಲಿ ನಾಲ್ವರ ಹೆಸರು ಕೈಬಿಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News