ಪೋಕ್ಸೋ ಪ್ರಕರಣ: ಆರೋಪಿ ಬಂಧನ
Update: 2019-09-30 22:02 IST
ಉಡುಪಿ, ಸೆ.30: ಕೊಲ್ಲೂರಿನಲ್ಲಿ ನಡೆದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಕುಂದಾಪುರ ಸಹಾಯಕ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ನೇತೃತ್ವದ ತಂಡ ಜಡ್ಕಲ್‌ನಲ್ಲಿ ಇಂದು ಬಂಧಿಸಿದೆ.
ಜಡ್ಕಲ್‌ನ ದೀಪು ಯಾನೆ ಜೇಮ್ಸ್(38) ಬಂಧಿತ ಆರೋಪಿ. ಈ ಒಂದು ತಿಂಗಳ ಹಿಂದೆ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನಂತರ ತಲೆಮರೆಸಿಕೊಂಡಿದ್ದ ಈತನನ್ನು ಪೊಲೀಸರು ಖಚಿತ ಮಾಹಿತಿ ಯಂತೆ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈತನನ್ನು ಅ.1ರಂದು ಉಡುಪಿ ಜಿಲ್ಲಾ ವಿಶೇಷ ನ್ಯಾಯಾಲಯದ ಮುಂದೆ ಪೊಲೀಸರು ಹಾಜರು ಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.