ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
Update: 2019-09-30 22:03 IST
ಉಡುಪಿ, ಸೆ.30: ಅನಾರೋಗ್ಯದಿಂದ ಬಳಲುತ್ತಿದ್ದ ಬೈಲೂರು ವಿಶಾಲ (54) ಎಂಬವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಸೆ.29ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಕೊರಂಗ್ರಪಾಡಿ ಮಾರ್ಪಳ್ಳಿಯ ಅಂಗಾರ ದೇವಾಡಿಗ ಎಂಬವರ ಮಗ ಮಹೇಶ್ ದೇವಾಡಿಗ(30) ಎಂಬವರು ಅನಾ ರೋಗ್ಯ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆ ಹೊಂದಿ ಸೆ.30ರಂದು ಬೆಳಗ್ಗೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.