ಅ.1ರಂದು ಬೃಹತ್ ರಕ್ತದಾನ ಶಿಬಿರ
Update: 2019-09-30 22:04 IST
ಉಡುಪಿ, ಸೆ.30: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಉಡುಪಿ, ರಕ್ತನಿಧಿ ಕೇಂದ್ರ ಜಿಲ್ಲಾಸ್ಪತ್ರೆ ಉಡುಪಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಅ.1ರಂದು ಬೆಳಗ್ಗೆ 10:30ಕ್ಕೆ ಉಡುಪಿ ಪುರಭವನದಲ್ಲಿ ಬೃಹತ್ ರಕ್ತದಾನ ಶಿಬಿರ- ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯ ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಉಡುಪಿಯ ಅಧ್ಯಕ್ಷ ಸುಬ್ರಮಣ್ಯ ಶೇರಿಗಾರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.