ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ
Update: 2019-09-30 22:06 IST
ಉಡುಪಿ, ಸೆ.30:2019-20ನೇ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ/ಪಿಹೆಚ್‌ಡಿ ವ್ಯಾಸಂಗ ಮಾಡಲಿಚ್ಛಿಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅ.15 ಕೊನೆಯ ದಿನ.
ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್‌ಸೈಟ್ www.bacwardclasses.kar.nic.in ಅಥವಾ ದೂರವಾಣಿ ಸಂಖ್ಯೆ; 080- 2574881/0820-2573881ನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.